ಐಎಎಸ್, ಕೆಎಎಸ್ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಜ್ಞಾನಗಂಗಾ ಅಕಾಡೆಮಿ ಎಸ್ಸಿ, ಎಸ್ಟಿ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಐಎಎಸ್, ಐಪಿಎಸ್ ಮತ್ತು ಕೆಎಎಸ್ ಪಕ್ಷೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ತರಬೇತಿಯಲ್ಲಿ ದೆಹಲಿ, ಬೆಂಗಳೂರು ಸಂಸ್ಥೆಗಳ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಮುಖ್ಯ ಪರೀಕ್ಷೆ ಹಾಗೂ ಪೂರ್ವಭಾವಿ ಪರೀಕ್ಷೆಗಳಿಗೆ ಹಾಗೂ ಸಂದರ್ಶನ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಪದವೀಧರ ಹಾಗೂ ಅಂತಿಮ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದ್ದು, ಆ.20ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿ ತಿಳಿಸಿದೆ. ವಿವರಗಳಿಗಾಗಿ- ಮೊ.9845138684.