ಉಚಿತ ನೋಟ್ ಪುಸ್ತಕ ವಿತರಣೆ
ಕ.ಪ್ರ.ವಾರ್ತೆ ಟಿ ಭದ್ರಾವತಿ ಟಿ ಜು.30
ಬೆಂಗಳೂರಿನ ವಿಜಯನಗರದ ಹಿಂದೂಸ್ತಾನ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಪಟ್ಟಣದ ಉಜ್ಜಿನೀಪುರದ ದಿ. ನಿಂಗಪ್ಪ ಅವರ ಸ್ಮರಣಾರ್ಥ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಶಾಲೆ ಪೀಠೋಪಕರಣಗಳ ವಿತರಣೆ ಮತ್ತು ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಶಾಸಕ ಎಂ.ಜೆ. ಅಪ್ಪಾಜಿಯವರನ್ನು ಸನ್ಮಾನಿಸಲಾಯಿತು.
ಶ್ರೀಮಂತಿಕೆ ಶಾಶ್ವತವಲ್ಲ: ಸಮಾರಂಭ ಉದ್ಘಾಟಿಸಿದ ಶಾಸಕ ಎಂ.ಜೆ. ಅಪ್ಪಾಜಿ, ಸಮಾಜದಲ್ಲಿರುವ ಬಹಳಷ್ಟು ಶ್ರೀಮಂತರು ಸಾಮಾಜಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು. ಶ್ರೀಮಂತಿಕೆ ಶಾಶ್ವತವಲ್ಲ. ಆದರೆ ಸಂಪತ್ತು ನಮ್ಮಲ್ಲಿರುವಾಗ ಮಾಡುವ ಸಮಾಜಸೇವೆ ಶಾಶ್ವತವಾಗಿ ಸಾರ್ವಜನಿಕರ ಮನಸ್ಸಿನಲ್ಲಿ ಉಳಿಯುವುದು ಎಂದರು.
ಸರ್ಕಾರಿ ಶಾಲೆಗಳ ಉದ್ಧಾರಕ್ಕೆ ಸರ್ಕಾರದೊಂದಿಗೆ ಸ್ಥಿತಿವಂತರು ಕೈಜೋಡಿಸಿದರೆ ಹಳ್ಳಿಗಳಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಮಾರ್ಪಾಡಾಗಬಹುದೆಂದು ಅವರು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ವಿ.ಎನ್. ಲಕ್ಷ್ಮಿನಾರಾಯಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಎಸ್. ಕುಮಾರ್, ತಾಪಂ ಸದಸ್ಯರು ಹಾಜರಿದ್ದರು.
ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ, ದೇವೇಂದ್ರನಾಯ್ಕ, ವ್ಯಕ್ತಿತ್ವ ವಿಕಸನ ತರಬೇತುದಾರ ವಿ.ಎಸ್. ಫಣಿಭೂಷಣ್ ಮೊದಲಾದವರು ಉಪಸ್ಥಿತರಿದ್ದರು.