ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಈಶ್ವರಪ್ಪ ಪ್ರಚೋದನಕಾರಿ ಭಾಷಣ: ವಿಚಾರಣೆ 22ಕ್ಕೆ ಮುಂದೂಡಿಕೆ

Vishwanath S
Updated On : 2 Jun 2013, 12:40 pm

ಶಿವಮೊಗ್ಗ: ಚುನಾವಣೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನಗರದ 2ನೇ ಜೆಎಂಎಫ್‌ಸಿ ನ್ಯಾಯಾಲಯವು ಜೂ.22ಕ್ಕೆ ಮುಂದೂಡಿದೆ.
ಕೆ.ಎಸ್. ಈಶ್ವರಪ್ಪ ಅವರು ವಿಪ್ರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು ನೀಡಿದ ದೂರಿನ ಅನ್ವಯ ದೂರು ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗುರುರಾಜ್ ಅವರು ವಿಚಾರಣೆಯನ್ನು ಮುಂದೂಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement