ಡೆಂಘೀ: ಜಾಗೃತಿ ಕಾರ್ಯಾಗಾರ
ಸಾಗರ: ಸ್ತ್ರೀಶಕ್ತಿ ಸಂಘಟನೆಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಡೆಂಘೀ ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸು ಕೆಲಸ ಮಾಡಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಬಿ.ಎಸ್. ಪ್ರಭಾಕರ್ ಹೇಳಿದರು.
ಇಲ್ಲಿನ ನಗರಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಉಳಿತಾಯ ಗುಂಪುಗಳಿಗೆ ಹಮ್ಮಿಕೊಂಡಿದ್ದ ಡೆಂಘೀ ಕುರಿತ ಜಾಗೃತಿ ಕಾರ್ಯಾಗಾರದಲ್ಲಿ, ಮುನ್ನೆಚ್ಚರಿಕೆ ವಹಿಸುವುದರಿಂದ ಡೆಂಘೀನಂತಹ ರೋಗಗಳಿಂದ ದೂರವಿರಲು ಸಾಧ್ಯ ಎಂದು ಹೇಳಿದರು. ಪೌರಾಯುಕ್ತ ಕೆ. ನರಸಿಂಹಮೂರ್ತಿ ಮಾತನಾಡಿ, ಈಗಾಗಲೆ ಡೆಂಘೀ, ಚಿಕೂನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗ ಹರಡದಂತೆ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದ್ದು ಜನರು ಆತಂಕ ಪಡಬೇಕಿಲ್ಲ. ಆಡಳಿತದ ಕೆಲಸಕ್ಕೆ ಜನರು ಸಹಕಾರ ನೀಡಬೇಕು ಎಂದು ಹೇಳಿದರು.
ನಗರಸಭೆ ಅಧಿಕಾರಿಗಳಾದ ಪ್ರಭಾಕರ್, ಶೈಲೇಶ್, ಮೌನೇಶ್, ಗುರುಪ್ರಸಾದ್, ಭೂಮೇಶ್, ನಗರಸಭೆ ಸದಸ್ಯ ಸುಂದರಸಿಂಗ್ ಇದ್ದರು.