ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸೊರಬ: ಪ್ರಸಕ್ತ ವರ್ಷದ ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ ವ್ಯಾಸಂಗಕ್ಕೆ ಪ್ರವೇಶಾತಿ ಆರಂಭವಾಗಿದೆ ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶಾಲ ಕಟ್ಟಡ, ನುರಿತ ಉಪನ್ಯಾಸಕರುಗಳು, ಗ್ರಂಥಾಲಯ, ಸುಸಜ್ಜಿತ ಪ್ರಯೋಗಾಲಯ, ಕ್ರೀಡೆ, ಸಾಂಸ್ಕೃತಿಕ, ಎನ್‌ಎಸ್‌ಎಸ್ ಅನುಕೂಲತೆಗಳು ಅತ್ಯಂತ ಕಡಿಮೆ ವೆಚ್ಚದಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹೊಂದಿರುವ ಕಾಲೇಜು ಈ ಹಿಂದಿನಿಂದಲೂ ಉತ್ತಮ ಫಲಿತಾಂಶ ನೀಡುತ್ತ ಬಂದಿದೆ. ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಸರ್ಕಾರದ ಆಶಯಕ್ಕೆ ಸ್ಪಂದಿಸಿ ಈ ಸದುಪಯೋಗವನ್ನು ಪಡೆಯಲು ವಿದ್ಯಾರ್ಥಿಗಳಲ್ಲಿ ಕೋರಿದ್ದಾರೆ.ಕಲಾವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಕನ್ನಡ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಅನ್ವಯಿಕ ಗಣಕ ವಿಜ್ಞಾನ, ಬಿಬಿಎಂ ಬಿಕಾಂ ವಿಭಾಗದಲ್ಲಿ ಕಡ್ಡಾಯ ವಿಭಾಗ ವಿಷಯಗಳು, ಬಿಎಸ್ಸಿ ವಿಭಾಗದಲ್ಲಿ ಭೌತಶಾಸ್ತ್ರ, ಗಣಿತಶಾಸ್ತ್ರ, ಗಣಕ ವಿಜ್ಞಾನ. ವಿವರಗಳಿಗೆ ದೂ-ಸಂ-08184 272259.