ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸೂಚನೆ

Lingaraj Badiger
Updated On : 5 Jun 2013, 11:09 am

ಶಿವಮೊಗ್ಗ: ಜಿಲ್ಲೆಯ ಸಹಕಾರಿ ಸಂಘಗಳ ಕಾರ್ಯದರ್ಶಿಗಳು ಅಥವಾ ಪದಾಧಿಕಾರಿಗಳು ತಮ್ಮ ಸಂಘಗಳ 2012-13ನೇ ಸಾಲಿನ ಲೆಕ್ಕ ಪರಿಶೋಧನೆಯನ್ನು 2013ರ ಆಗಸ್ಟ್ ಮಾಹೆಯೊಳಗಾಗಿ ಪೂರ್ಣಗೊಳಿಸಿಕೊಳ್ಳುವಂತೆ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪನಿರ್ದೇಶಕರು ತಿಳಿಸಿದ್ದಾರೆ.
ಈಗಾಗಲೇ ಜಿಲ್ಲೆಯಲ್ಲಿರುವ ಎಲ್ಲಾ ಸಹಕಾರ ಸಂಘಗಳಿಗೆ ಲೆಕ್ಕ ಪರಿಶೋಧಕರ ಪ್ಯಾನೆಲ್‌ನ್ನು ನೀಡಲಾಗಿದೆ. ಸಹಕಾರ ಸಂಘಗಳು ಆಯಾ ಸಂಘಕ್ಕೆ ನೀಡಿರುವ ಪ್ಯಾನೆಲ್‌ನಲ್ಲಿರುವ ಲೆಕ್ಕ ಪರಿಶೋಧಕರಲ್ಲಿ ಒಬ್ಬ ಲೆಕ್ಕ ಪರಿಶೋಧಕರನ್ನು ಆಯ್ಕೆ ಮಾಡಿಕೊಂಡು ಲೆಕ್ಕ ಪರಿಶೋಧನೆ ಪೂರ್ಣಗೊಳಿಸಿಕೊಳ್ಳುವಂತೆ ಅವರು ಸೂಚಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ಕಾಲೇಜು ವಿದ್ಯಾರ್ಥಿ ನಿಲಯಗಳಿಗೆ 2013-14ನೇ ಸಾಲಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳಲ್ಲಿ ಅರ್ಜಿ ಪಡೆದು ಜೂ.28ರೊಳಗಾಗಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಯನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆಯಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments