ನೀವೇ ವಿಷಯ ಆಯ್ದುಕೊಳ್ಳಿ: ಡಿಸಿ
ಶಿವಮೊಗ್ಗ: ನೀಮಗಿಷ್ಟವಾದ ವಿಷಯವನ್ನು ನೀವೆ ಆಯ್ದುಕೊಳ್ಳಿ, ತನ್ಮೂಲಕ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ವೃತ್ತಿಪರ ಶಿಕ್ಷಣ ಕೋರ್ಸ್ಣಗಳ ಸೀಟು ಆಯ್ಕೆಗೆ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಗರದ ಜವಾಹರ ಲಾಲ್ ನೆಹರು ರಾಷ್ಟ್ರೀಯ ಎಂಜಿನಿಯರಿಂಗ್ ಕಾಲೇಜ್ನಲ್ಲಿ ಬುಧವಾರ ಸಿಇಟಿ-2013ರ ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ವೃತ್ತಿಪರ ಶಿಕ್ಷಣ ಕೋರ್ಸ್ಣಗಳಿಗೆ ಪ್ರವೇಶ ಪರೀಕ್ಷೆ ಹಾಗೂ ಕೌನ್ಸಿಲಿಂಗ್ ನಡೆಸುವಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮಾದರಿಯಾಗಿದ್ದು, ಪಾರದರ್ಶಕವಾಗಿ ಪರೀಕ್ಷೆ ಹಾಗೂ ಸೀಟು ಹಂಚಿಕೆ ನಡೆಯುವುದು ವಿಶೇಷ ಎಂದರು. ಇಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ತಮ್ಮ ಇಚ್ಛೆಯಂತೆ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.