ಕೆಡಿಪಿ ಸಭೆ
ಶಿವಮೊಗ್ಗ: ಜೂನ್ 10ರಂದು ಬೆಳಿಗ್ಗೆ 11 ಗಂಟೆಗೆ ತಾಪಂ ಸಭಾಂಗಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆಯಲ್ಲಿ 2012-13ನೇ ಸಾಲಿನ ತಾಲೂಕು ಮಟ್ಟದ ಅಂತಿಮ ತ್ರೈಮಾಸಿಕ ಕೆಡಿಪಿ ಸಭೆ ಏರ್ಪಡಿಸಲಾಗಿದೆ. ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ತಾಪಂ ಕಾರ್ಯಾಲಯ ಭದ್ರಾವತಿ ತಾಲೂಕಿನಲ್ಲಿ ಬಿಸಿಎಂ ಇಲಾಖಾ ಸ್ನಾತಕೋತ್ತರ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದವರಾಗಿರಬೇಕು. ಪ್ರವರ್ಗ-1 ವಿದ್ಯಾರ್ಥಿಗಳಿಗೆ 1ಲಕ್ಷ ರುಪಾಯಿ ಪ.ಜಾತಿ, ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 2 ಲಕ್ಷ ರುಪಾಯಿ ಹಾಗೂ 2ಎ, 2ಬಿ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳಿಗೆ 44,500 ಸಾವಿರ ರುಪಾಯಿ ವಾರ್ಷಿಕ ಆದಾಯ ಮಿತಿ ಇರುತ್ತದೆ.ಅರ್ಜಿಯನ್ನು ತಾಪಂ ಭದ್ರಾವತಿ ಅಥವಾ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಕಳೆದ ಸಾಲಿನಲ್ಲಿ ಉತ್ತೀರ್ಣರಾದ ದೃಢೀಕೃತ ಅಂಕಪಟ್ಟಿಯೊಂದಿಗೆ ಲಗತ್ತಿಸಿ ಆಗಸ್ಟ್ 10ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ಭದ್ರಾವತಿಯ ಹಿಂದುಳಿದ ಇಲಾಖೆ, ತಾಪಂ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.