ಅರ್ಜಿ ಆಹ್ವಾನ
ಶಿವಮೊಗ್ಗ: ಹೊಳಲೂರು ಕೆನರಾ ಬ್ಯಾಂಕ್ನ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಬಗ್ಗೆ ಶಿಕ್ಷಣ ನೀಡಲು ಉಚಿತ ತರಬೇತಿ ನೀಡಲು ಆಸಕ್ತ ನಿರುದ್ಯೋಗ ಯುವಕರಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿ 18 ರಿಂದ 40 ವರ್ಷ ವಯೋವುತಿ ಒಳಗಿನವರಾಗಿದ್ದು, ಕಂಪ್ಯೂಟರ್ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದಿದವರಬೇಕು. ಸ್ವ ಉದ್ಯೋಗ ಆರಂಭಿಸಲು ಆಸಕ್ತಿ ಇರಬೇಕು. 45 ದಿನಗಳು ತರಬೇತಿ ಅವಧಿಯಲ್ಲಿ ಉಚಿತ ಊಟ- ವಸತಿ ವ್ಯವಸ್ಥೆ ಇರುತ್ತದೆ. ತರಬೇತಿಯು ಸದ್ಯದಲ್ಲಿಯೇ ಆರಂಭವಾಗಿದ್ದು, ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ನಿರ್ದೇಶಕರು ಕೆನರಾ ಬ್ಯಾಂಕ್ ಸ್ವ ಉದ್ಯೋಗ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊನ್ನಾಳಿ ಮಾರ್ಗ ಹೊಳಲೂರು- 577216, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು ಎಂದು ಬ್ಯಾಂಕ್ನ ನಿರ್ದೇಶಕರು ತಿಳಿಸಿದ್ದಾರೆ. ವಿವರಗಳಿಗಾಗಿ- 08182-245721.
ಮೊಬೈಲ್ ರಿಪೇರಿ ತರಬೇತಿ ಶಿಬಿರ
ಶಿವಮೊಗ್ಗ: ಕುಮುಟಾದ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳನ್ನು ಗುರುತಿಸಿ ಜೂನ್ 25 ರಿಂದ ಜುಲೈ 24 ರವರೆಗೆ ಮೊಬೈಲಲ್ಫೋನನ್ರಿಪೇರಿ ತರಬೇತಿ ಶಿಬಿರ ಹಮ್ಮಿಕೊಂಡಿದೆ. ತರಬೇತಿಯ ವೇಳೆ ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋವುತಿ 18ರಿಂದ 45 ವರ್ಷಗಳು ಹಾಗೂ ಕನಿಷ್ಠ ವಿದ್ಯಾರ್ಹತೆ, ಕನ್ನಡ ಓದಲು, ಬರೆಯಲು ಬರಬೇಕು.
ಅರ್ಜಿದಾರರು ತಮ್ಮ ಹೆಸರು, ಪೋಷಕರ ಹೆಸರು, ದೂರವಾಣಿ ಸಂಖ್ಯೆ, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ಪ್ರಸ್ತುತ ಮಾಡುತ್ತಿರುವ ಉದ್ಯೋಗ, ಪಡೆಯಲ್ಲಿಚ್ಚಿಸುವ ತರಬೇತಿ, ಈ ತರಬೇತಿ ವಿಷಯದಲ್ಲಿ ನಿಮಗಿರುವ ಅನುಭವ, ನಿಮ್ಮ ಬ್ಯಾಂಕಿನ ಸಲಹೆಯಂತೆ ಅರ್ಜಿ ಸಲ್ಲಿಸಿದ್ದಲ್ಲಿ ಬ್ಯಾಂಕಿನ ಹೆಸರು ಮತ್ತು ವಿಳಾಸವನ್ನು ತಪ್ಪದೇ ಬರೆದುಕಳುಹಿಸಬೇಕು.
ಉತ್ತರ ಕನ್ನಡ ಜಿಲ್ಲೆಯೊಂದಿಗೆ ಶಿವಮೊಗ್ಗದ ಸಾಗರ ಮತ್ತು ಸೊರಬ ತಾಲೂಕುಗಳ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು, ಆಸಕ್ತ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು, ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಂಡ್ ಆರ್ಸೆಟಿ), ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581343 ಉತ್ತರಕನ್ನಡ ಜಿಲ್ಲೆ ಇಲ್ಲಿಗೆ ಅರ್ಜಿ ಸಲ್ಲಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ವಿವರಗಳಿಗಾಗಿ- 08386-220530.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.