ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪಶು ವೈದ್ಯಕೀಯ ಮಂಡಳಿ ಮಾನ್ಯತೆಗೆ ಮನವಿ

Lingaraj Badiger
Updated On : 10 Jun 2013, 11:19 am

ಕ.ಪ್ರ.ವಾರ್ತೆ, ಶಿವಮೊಗ್ಗ,  ಜೂ.9
ಶಿವಮೊಗ್ಗ ನಗರದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಮಂಡಳಿ ಮಾನ್ಯತೆ ದೊರಕಿಸಲು ಪ್ರಯತ್ನಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮನವಿ ಅರ್ಪಿಸಿದರು.
ಶಿವಮೊಗ್ಗ ನಗರದಲ್ಲಿ 2006-07ನೇ ಸಾಲಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭವಾಗಿದ್ದು, ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಆರಂಭಿಸಿರುವ ಈ ಪಶುವೈದ್ಯಕೀಯ ಮಹಾವಿದ್ಯಾಲಯ ಭಾರತೀಯ ಪಶುವೈದ್ಯಕೀಯ ಮಂಡಳಿಯ ನಿಯಮಗಳ ರೀತಿಯ ಅವಶ್ಯಕವಾಗಿರುವ ಮೂಲಭೂತ ಸೌಕರ್ಯಗಳನ್ನು ಹೊಂದದೇ ಇರುವುದರಿಂದ ಹಾಗೂ ಅನೇಕ ರೀತಿಯ ತಾಂತ್ರಿಕ ನ್ಯೂನ್ಯತೆಗಳು ಇರುವುದರಿಂದ ಮಾನ್ಯತೆ ರದ್ದಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದು, ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರಿ ಸೇವೆ ಸಲ್ಲಿಸಲು ನಿರಾಕರಿಸಲ್ಪಟ್ಟಿರುವ ಕಾರಣ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.
ಹೀಗಾಗಿ ತಾವು ಸಂಬಂಧಪಟ್ಟ  ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರಿಗೆ ಸೂಕ್ತ ಶಿಫಾರಸು ಮಾಡಿ ಶಿವಮೊಗ್ಗ ಪಶುವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಮಂಡಳಿಯಿಂದ ಮಾನ್ಯತೆ ದೊರಕಿಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸುವಂತೆ ಎನ್‌ಎಸ್‌ಯುಐ ಕಾರ್ಯಕರ್ತರು ಸಚಿವರನ್ನು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮಧುಸೂಧನ್, ಕೆ. ಚೇತನ್, ಶ್ರೀಜಿತ್, ವಿಕಾಸ್, ಸಂತೋಷ್, ಆದರ್ಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement