ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಶಿಕ್ಷಣ ವ್ಯವಸ್ಥೆಯ ನ್ಯೂನತೆ ಸರಿಪಡಿಸಿ'

Lingaraj Badiger
Updated On : 10 Jun 2013, 11:19 am

ಕ.ಪ್ರ.ವಾರ್ತೆ, ಶಿವಮೊಗ್ಗ,  ಜೂ.9
ಶಿಕ್ಷಣ ವ್ಯವಸ್ಥೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ನಗರಸಭಾ ಮಾಜಿ ಸದಸ್ಯ ಎನ್.ಕೆ. ಶ್ಯಾಮಸುಂದರ್ ಮತ್ತಿತರರು ಭಾನುವಾರ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮನವಿ ಸಲ್ಲಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಡೊನೇಷನ್ ಪಡೆದು 8ನೇ ತರಗತಿಗೆ ಮಕ್ಕಳನ್ನು ಪ್ರವೇಶಮಾಡಿಕೊಳ್ಳುತ್ತಾರೆ. 9ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮಾತ್ರ 10ನೇ ತರಗತಿಗೆ ಮುಂದುವರಿಸಿ ಉಳಿದ ಮಕ್ಕಳಿಗೆ ಟಿಸಿ ಕೊಡಲಾಗುತ್ತಿದೆ. ಈ ಮೂಲಕ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಕುಗ್ಗಿಸಿ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಶೇ.100 ಫಲಿತಾಂಶ ಪಡೆದು ಸಾರ್ವಜನಿಕರಲ್ಲಿ ಈ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂಬ ಭ್ರಮೆ ಸೃಷ್ಟಿಸಿ ತಮ್ಮ ಶಿಕ್ಷಣ ಸಂಸ್ಥೆಯ ಪ್ರತಿಷ್ಠೆ ಹೆಚ್ಚಿಸಿಕೊಂಡು ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚಿನ ಡೊನೇಷನ್ ರೂಪದಲ್ಲಿ ಹಣ ಸುಲಿಯಲಾಗುತ್ತಿದೆ. ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಖಾಸಗಿ ಶಾಲೆಗಳು 9ನೇ ತರಗತಿಯ ಮಕ್ಕಳಿಗೆ ಟಿಸಿ ಕೊಟ್ಟು ಕಳುಹಿಸುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಲಾಗಿದೆ.
ಖಾಸಗಿ ಶಾಲೆಗಳ ಅಕ್ರಮಗಳಲ್ಲಿ ಶಿಕ್ಷಣಾಧಿಕಾರಿಗಳೂ ಸಹ ಶಾಮೀಲಾಗಿ ಅಂತಹ ಶಾಲೆಗಳ ಮೇಲೆ ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement