ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಡಿಸಿಯಿಂದ ವಕೀಲ ವೃತ್ತಿಗೆ ಅವಮಾನ: ವಕೀಲರ ಪ್ರತಿಭಟನೆ

Mainashree
Updated On : 12 Jun 2013, 1:00 am

ಶಿವಮೊಗ್ಗ: ವಕೀಲ ಸಮೂಹವನ್ನು ಅವಹೇಳನ ಮಾಡುವ ರೀತಿಯಲ್ಲಿ ಜಿಲ್ಲಾಧಿಕಾರಿಯವರು ನಿಂದಿಸಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗ ನ್ಯಾಯಾಲಯದ ವಕೀಲರ ತಂಡ ಹೋರಾಟಕ್ಕಿಳಿದಿದೆ. ಆದರೆ, ಕೆಲವು ವಕೀಲರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಸ್ಪಷ್ಟಪಡಿಸಿದ್ದಾರೆ. ಆಗಿದ್ದಿಷ್ಟು, ಸೋಮವಾರ ಮಧ್ಯಾಹ್ನ 3.45ರ ಸುಮಾರಿಗೆ ತೆರೆದ ನ್ಯಾಯಾಲಯದಲ್ಲಿ (ಡಿಸಿ ಕೋರ್ಟ್) ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರು ತಡೆಯಾಜ್ಞೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಏರಿದ ದನಿಯಲ್ಲಿ ವಕೀಲರು ಪ್ರಶ್ನಿಸಿದ್ದಾರೆ. ಜೊತೆಗೆ ಡಿಸಿ ಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನೇ ಪ್ರಶ್ನಿಸಿದ್ದಾರೆನ್ನಲಾಗಿದೆ. ಈ ಸಂದರ್ಭದಲ್ಲಿ ಡಿಸಿಯವರು ಉಸುರಿದ ಕೆಲವು ಪದಗಳು ಘಟನೆಗೆ ಕಿಚ್ಚುಹಚ್ಚಲು ಕಾರಣವಾಗಿದೆ.
ಪ್ರತಿಭಟನೆ: ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಗೊಳಿಸಿರುವ ಜಿಲ್ಲಾಧಿಕಾರಿಯವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ವಕೀಲರ ಸಂಘದ ಸದಸ್ಯರು ರಾಜ್ಯಪಾಲರು, ಸಭಾಧ್ಯಕ್ಷರಿಗೆ ಫ್ಯಾಕ್ಸ್ ಮೂಲಕ ಮನವಿ ಅರ್ಪಿಸಿದ್ದಾರೆ. ಅದೇ ರೀತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ದೌಡಾಯಿಸಿದ ವಕೀಲರು ಘೋಷಣೆ ಕೂಗಿ ಜಿಲ್ಲಾಧಿಕಾರಿ ವಿರುದ್ಧ ಅಸಮಾಧಾನ ಹೊರಹಾಕಿದರು. ವಕೀಲರಾದ ದೇವೇಂದ್ರಪ್ಪ, ಈಸೂರು ಲೋಕೇಶ್, ಎನ್. ನಾಗೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement