ಬಿಜೆಪಿ ಸಂಘಟನೆ ಪುನಾರಚನೆ
ಶಿವಮೊಗ್ಗ: ವಿಧಾನಸಭಾ ಚುನಾವಣೆ ಸೋಲಿನ ಅವಲೋಕನ ಮತ್ತು ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಇಟ್ಟುಕೊಂಡು ಸಂಘಟನಾತ್ಮಕ ಪುನಾರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ.
ಈ ಪ್ರಕ್ರಿಯೆ ಪೂರ್ವ ತಯಾರಿಗಾಗಿ ಬಿಜೆಪಿ ಜಿಲ್ಲಾ ಸಮಿತಿ ಸಭೆ ಜೂನ್ 13ರಂದು ಬೆಳಿಗ್ಗೆ 10.30ಕ್ಕೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿದ್ದು, ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ರಾಜ್ಯದಿಂದ ಶಿವಮೊಗ್ಗ ಜಿಲ್ಲೆಗೆ ನಿಯುಕ್ತಿಗೊಂಡಿರುವ ಶಾಸಕ ಡಿ.ಎನ್. ಜೀವರಾಜ್ ಹಾಗೂ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದು, ಮಾರ್ಗದರ್ಶನ ಮಾಡಲಿದ್ದಾರೆ.
ಸಭೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ರಾಜ್ಯ ಸಮಿತಿ ಹಾಗೂ ಸದಸ್ಯರು, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾಗಳ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಜರಿರುವರು.