ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಗುಟ್ಕಾ ಮಾರಾಟಗಾರರ ವಿರುದ್ಧ ಕಠಿಣ ಕ್ರಮ

Lingaraj Badiger
Updated On : 13 Jun 2013, 10:44 am

ಶಿವಮೊಗ್ಗ: ಸಗಟು ಮತ್ತು ಚಿಲ್ಲರೆ ವ್ಯಾಪರಸ್ಥರು ಅಕ್ರಮವಾಗಿ ಗುಟ್ಕಾ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾ. ಆರ್.ಎಂ. ಶೆಟ್ಟರ್ ಎಚ್ಚರಿಸಿದ್ದಾರೆ.
ನಗರದ ಕೋರ್ಟ್ ಸರ್ಕ್‌ಲ್‌ನಲ್ಲಿರುವ ಕೆಲವು ಅಂಗಡಿಗಳಿಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಗುಟ್ಕಾ ಮಾರಾಟ ನಿಷೇಧ ಮಾಡಿದ್ದರೂ ಸಗಟು ಮತ್ತು ಚಿಲ್ಲರೆ ಮಾರಾಟಗಾರರು ಗುಟ್ಕಾ ಮಾರಾಟ ಮಾಡುತ್ತಿರುವುದು ಸರ್ಕಾರದ ಆದೇಶ ಉಲ್ಲಂಘನೆ ಮಾಡಿದಂತೆಯೇ ಸರಿ. ಆದರಿಂದ ಗುಟ್ಕಾ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವುದು ಅಂಗಡಿ ಮಾಲೀಕರ ಕರ್ತವ್ಯವಾಗಿದ್ದು, ಅದನ್ನು ಪ್ರತಿಯೊಂದು ಅಂಗಡಿ ಮಾಲೀಕರು ಅನುಸರಿಸಬೇಕು ಎಂದರು.
ಕಟ್ಟುನಿಟ್ಟಿನ ಕ್ರಮ: ಜು.10ರೊಳಗಾಗಿ ತಮ್ಮಲ್ಲಿರುವ ಗುಟ್ಕಾ ವಸ್ತುಗಳನ್ನು ಸಂಪೂರ್ಣವಾಗಿ ಮಾರಾಟ ಮಾಡಿಕೊಳ್ಳಬೇಕು.
ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದ ಅವರು, ಈಗಾಗಲೇ ಸರ್ಕಾರ, ತಂಬಾಕು ಮತ್ತು ನಿಕೋಟಿನ್ ವಸ್ತುಗಳನ್ನೊಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲ ಪದಾರ್ಥಗಳನ್ನು ಯಾವುದೇ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಹಾಗೂ ಶೇಖರಣೆಯನ್ನು ನಿಷೇಧಿಸಲಾಗಿದ್ದರೂ, ಅಕ್ರಮವಾಗಿ ಮಾರಾಟ ಮತ್ತು ಶೇಖರಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಫುಲ್ ಬನ್ಸಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement