ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

15ಕ್ಕೆ ಮಲೆನಾಡು ಫಲವೃಕ್ಷ ಮೇಳ

Lingaraj Badiger
Updated On : 14 Jun 2013, 10:45 am

ಸಾಗರ: ಭೀಮನಕೋಣೆ ಗ್ರಾಮ ಅರಣ್ಯ ಸಮಿತಿ, ವೃಕ್ಷಲಕ್ಷ ಆಂದೋಲನ, ಶೆಡ್ತಿಕೆರೆ ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಇವರ ಆಶ್ರಯದಲ್ಲಿ ಜೂ. 15ರಂದು ಬೆಳಿಗ್ಗೆ 10-30 ರಿಂದ ಸಂಜೆ 7ರವರೆಗೆ ಮಲೆನಾಡು ಫಲವೃಕ್ಷ ಮೇಳ ನಡೆಯಲಿದೆ.
ಪಟ್ಟಣದ ಬಾಸಂ ಸಭಾಭವನದಲ್ಲಿ ನಡೆಯುವ ಮೇಳದಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಪರಿಸರ ವಿಜ್ಞಾನಿ ಡಾ.ಟಿ.ವಿ. ರಾಮಚಂದ್ರ ಹಾಗೂ ತಂಡ ಸಿದ್ಧಪಡಿಸಿರುವ ಶಿವಮೊಗ್ಗ ಜಿಲ್ಲೆಯ ಅರಣ್ಯ ಪರಿಸ್ಥಿತಿಯ ಅಧ್ಯಯನ ವರದಿಯನ್ನು ಬಿಡುಗಡೆಗೊಳಿಸಲಾಗುವುದು.
ಕಾರ್ಯಕ್ರಮದಲ್ಲಿ ಪಶ್ಚಿಮಘಟ್ಟ ಕಾರ್ಯಪಡೆ ನಿಕಟಪೂರ್ವ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಸಾಹಿತಿ ಡಾ. ನಾ.ಡಿಸೋಜ, ಪರಿಸರ ವಿಜ್ಞಾನಿ ಡಾ. ಟಿ.ವಿ. ರಾಮಚಂದ್ರ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಶಿರಸಿ ಕದಂಬ ಸೌಹಾರ್ದ ಸಂಸ್ಥೆಯ ಶಂಭುಲಿಂಗ ಹೆಗಡೆ ನಡಗೋಡು, ತಾಪಂ ಅಧ್ಯಕ್ಷ ಮಹಾಬಲೇಶ್ವರ ಕುಗ್ವೆ, ತೋಟಗಾರಿಕೆ ಇಲಾಖೆಯ ಜಿಲ್ಲಾ ನಿರ್ದೇಶಕ ಡಾ. ವಿಶ್ವನಾಥ್ ಪಾಲ್ಗೊಳ್ಳಲಿದ್ದಾರೆ.
ಕೋಮಲ ನೇಮಕ
ಶಿವಮೊಗ್ಗ:  ಕೋಮಲ ಅವರನ್ನು 6ನೇ ವಾರ್ಡ್ ಶಿವಮೊಗ್ಗ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಉತ್ತರ ಬ್ಲಾಕ್ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆರ್. ಮಮತ ಸಿಂಗ್ ತಿಳಿಸಿದ್ದಾರೆ.
ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮಿ ಸಿ. ಪಾಟೀಲ್ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement