ಬಸ್ ಸಂಚಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.13 ಶಿಕಾರಿಪುರ ತಾಲೂಕಿನ ಮತ್ತಿಕೊಪ್ಪ, ನಿಂಬೆಗೊಂದಿ, ಹಳೆಮುಗಳಗೆರೆ, ಹೊಸಮುಗಳಗೆರೆ ಮುಂತಾದ ಗ್ರಾಮಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಪರ್ಕ ನೀಡುವಂತೆ ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ನಿಂಬೆಗೊಂದಿ ಹಾಗೂ ಮತ್ತಿಕೊಪ್ಪ ಮಾರ್ಗದ ಗ್ರಾಮಸ್ಥರಿಗೆ ಅನುಕೂಲವಾಗಿದ್ದರಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರು. ಈ ಗ್ರಾಮಗಳಲ್ಲಿ 15 ಸಾವಿರ ಜನಸಂಖ್ಯೆ ಇದ್ದು, ಹಾಲಿ 2 ಖಾಸಗಿ ಬಸ್‌ಗಳು ಮಾತ್ರ ಸಂಚರಿಸುತ್ತಿವೆ. ಈಗ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸಿದ್ದರಿಂದ ಶಾಲಾಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದರಿಂದಾಗಿ ಖಾಸಗಿ ಬಸ್‌ಗಳಲ್ಲಿ ನೂಕುನುಗ್ಗಲು ಉಂಟಾಗುತ್ತಿದೆ.
ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಕಡಿಮೆ ವೆಚ್ಚದಲ್ಲಿ ಪಯಾಣಿಸುತ್ತಿದ್ದರು. ಈಗ ಹೆಚ್ಚು ಹೊರೆ ಬೀಳುತ್ತಿದೆ. ಆದ್ದರಿಂದ ಈ ಹಿಂದಿನಂತೆ ಸಾರಿಗೆ ಸಂಸ್ಥೆ ಬಸ್‌ಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಾಗಪ್ಪ, ರಾಮಚಂದ್ರಪ್ಪ, ಸಿದ್ದಪ್ಪ, ಬಸವರಾಜಪ್ಪ, ಶಿವಪ್ಪ, ಲೋಕಪ್ಪ ಮತ್ತಿತರರು ಪಾಲ್ಗೊಂಡಿದ್ದರು.