ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ- ಶಿಕಾರಿಪುರ ತಾಲೂಕು ಪಂಚಾಯಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 8 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 4ರ ಸಂಜೆ 5.30ಕ್ಕೆ ಕೊನೆ ದಿನವಾಗಿರುತ್ತದೆ. ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಆಡಳಿತ ಸೌಧ, ಶಿಕಾರಿಪುರ ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
--