ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅನರ್ಹರಿಗೂ ನಿವೇಶನ ಹಂಚಿಕೆ: ಆರೋಪ

Lingaraj Badiger
Updated On : 15 Jun 2013, 10:47 am

ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನಲ್ಲಿ ನಿವೇಶನ ಹಂಚಿಕೆ ಮಾಡುತ್ತಿದ್ದು, ಕೆಐಎಡಿಬಿ ಅಧಿಕಾರಿಗಳು ಅನರ್ಹರಿಗೂ ನಿವೇಶನ ಹಂಚಿಕೆ ಮಾಡುತಿದ್ದಾರೆ ಎಂದು ಆರೋಪಿಸಿ ಗ್ಯಾರೇಜ್ ಮತ್ತು ವರ್ಕ್‌ಶಾಪ್ ಅಸೋಸಿಯೇಷನ್ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈಗಾಗಲೇ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಾಕಿ ಉಳಿದಿರುವ ನಿವೇಶನಗಳನ್ನು ದಾವಣಗೆರೆ ಮತ್ತು ಬೆಂಗಳೂರಿನ ಕೆಐಎಡಿಬಿ ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನರ್ಹರಿಗೆ ನಿವೇಶನ ಹಂಚಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮುಂಗಡ ಹಣ ಪಾವತಿ: ಕಳೆದ ಮೂರು ವರ್ಷಗಳ ಹಿಂದೆಯೇ ಸುಮಾರು 80 ಜನ ಬಡ ಆಟೋಮೊಬೈಲ್ ಕೆಲಸಗಾರರು ಅರ್ಜಿ ಸಲ್ಲಿಸಿ ಮುಗಂಡ ಹಣ ಪಾವತಿ ಮಾಡಿದ್ದರು. ಇದರಲ್ಲಿ ಎಸ್.ಸಿ ಮತ್ತು ಎಸ್.ಟಿ ಹಾಗೂ ಅಲ್ಪಸಂಖ್ಯಾತರ ಸಮುದಾಯದವರು ಕೂಡ ಇದ್ದಾರೆ ಎಂದು ಅವರು ತಿಳಿಸಿದರು.
ಅರ್ಜಿ ಸಲ್ಲಿಸಿರುವವರಿಗೆ ನಿವೇಶನ ಹಂಚಿಕೆ ಮಾಡುವುದರ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು. ನಂತರ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆಯಬೇಕು ಎಂಬ ನಿಯಮವಿದೆ.
ಆದರೆ, ಕೆಐಎಡಿಬಿ ಅಧಿಕಾರಿಗಳು ಇದಾವುದನ್ನು ಮಾಡದೇ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಅನರ್ಹರಿಗೆ ನಿವೇಶನ ನೀಡುತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ಆರೋಪಿಸಿದರು. ಕೂಡಲೇ ಜಿಲ್ಲಾಧಿಕಾರಿಗಳು ಸಭೆ ಕರೆದು ಅಕ್ರಮವಾಗಿ ನಿವೇಶನ ಹಂಚಿಕೆ ಮಾಡುತ್ತಿರುವ ವ್ಯಕ್ತಿಗಳು ಮತ್ತು ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಸೋಸಿಯೇಷನ್ ಸದಸ್ಯರು ಮನವಿಯಲ್ಲಿ ಒತ್ತಾಯಿಸಿದರು.
ಈ ವೇಳೆ ಆಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಧನಂಜಯ, ಗುಂಡೂರಾವ್, ಸಿ.ಎಲ್. ರಮೇಶ್, ರಂಗನಾಥ್, ಮಾಲತೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement