ಅರ್ಜಿ ಆಹ್ವಾನ
ಶಿವಮೊಗ್ಗ: ತಾಲೂಕು ಸಮಾಜ ಕಲ್ಯಾಣ ಇಲಾಖೆಯು ಸೊರಬ ತಾಲೂಕಿನಲ್ಲಿ ಮೆಟ್ರಿಕ್ನ್ಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರವೇಶ ಬಯಸುವ ಅಭ್ಯರ್ಥಿಗಳು ಸ್ವಂತ ಊರಿನಿಂದ ವಿದ್ಯಾರ್ಥಿ ನಿಲಯಗಳಿಗೆ ಕನಿಷ್ಟ 5 ಕಿ.ಮೀ. ದೂರವಿರಬೇಕು. ಪದವಿಪೂರ್ವ, ಪದವಿ, ಡಿಪ್ಲೋಮ, ಐಟಿಐ, ಡಿ.ಇಡ್., ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರದ ದೃಢೀಕರಿಸಿ ಸಲ್ಲಿಸುವುದು ಹಾಗೂ ವಾಸದ ದೃಢೀಕರಣ ಪ್ರತಿ ಲಗತ್ತಿಸುವುದು. ಮತ್ತು ಪಾಸ್ಪೋರ್ಟ್ ಸೈಜ್ ಫೋಟೋ 3 ಪ್ರತಿಯನ್ನು ಸಲ್ಲಿಸುವುದು ಹಾಗೂ ಬ್ಯಾಂಕ್ ಅಕೌಂಟ್ಪಾಸ್ ಪುಸ್ತಕದ ಜೆರಾಕ್ಪ್ರ್ಸ್ತಿ ಹಾಗೂ ಆಯ್ಕೆಯಾದ ವಿದ್ಯಾರ್ಥಿಗಳು ಕಡ್ಡಾಯವಾಗಿ 100 ರು. ಪಾವತಿಸಬೇಕು. ವಿದ್ಯಾರ್ಥಿ ನಿಲಯಗಳಿಗೆ ಸೇರಲು ಇಚ್ಛಿಸುವ ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳ ನಿಗದಿತ ಅರ್ಜಿ ನಮೂನೆಯನ್ನು ತಾಲೂಕು ಸಮಾಜ ಕಲ್ಯಾಣ ಕಚೇರಿ, ಸೊರಬ ಮೇಲ್ವಿಚಾರಕರುಗಳಿಂದ ಪಡೆದು ಜುಲೈ 10ರೊಳಗೆ ಸಲ್ಲಿಸಬೇಕು. (ದೂ.ಸಂ.- 08184-272089)
ಸಾಮಾನ್ಯ ಸಭೆ
ಶಿವಮೊಗ್ಗ: ಜೂನ್ 19ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲಲ್ನಜೀರ್ಸಾಬಬ್ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಲಿದೆ. ಸದಸ್ಯರು ಕಲಾಪದಲ್ಲಿ ಭಾಗವಹಿಸುವಂತೆ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಭೆಗೆ ಆಗಮಿಸುವಂತೆ ಜಿ.ಪಂ. ಸಿಇಒ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.