ಅರ್ಜಿ ಆಹ್ವಾನ
ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖಖ್ಸಮುದಾಯದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ ಢಿಢಿಢಿ.್ಜ್ಟ್ಞಜ್ಟಟ.್ಛ್ಟಟ. ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಮೂಲಕ ಆಗಸ್ಟ್ 5ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸಿ.ಎಸ್. ಆಸ್ಪತ್ರೆ ಕಟ್ಟಡ, ಎಲ್.ಎಲ್.ಆರ್. ರಸ್ತೆ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸಬೇಕು. ಮಾಹಿತಿ- 08182- 220206.
ಜಿಪಂ ಸಾಮಾನ್ಯ ಸಭೆ
ಶಿವಮೊಗ್ಗ: ಜೂನ್ 19ರಂದು ಬೆಳಿಗ್ಗೆ 11 ಗಂಟೆಗೆ ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸದಸ್ಯರು ಸಕಾಲಕ್ಕೆ ಆಗಮಿಸಿ, ಕಲಾಪದಲ್ಲಿ ಭಾಗವಹಿಸುವಂತೆ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಜಿ.ಪಂ. ಸಿಇಒ ತಿಳಿಸಿದ್ದಾರೆ.
ಸಭೆ ಮುಂದೂಡಿಕೆ
ಜು.18ರಂದು ಬೆಳಿಗ್ಗೆ 11 ಗಂಟೆಗೆ ನಡೆಯಬೇಕಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದ್ದು, ಸದರಿ ಸಭೆಯು ಜೂನ್ 19ರಂದು ಈ ಹಿಂದೆ ನಿಗದಿ ಪಡಿಸಲಾದ ಸ್ಥಳದಲ್ಲಿ ನಡೆಯಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಪಡಿತರ ಬಿಡುಗಡೆ
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಪಡಿತರ ಹಂಚಿಕೆಯಾಗಿದ್ದು, ನಿಗದಿತ ಪ್ರಮಾಣವನ್ನು ಆಹಾರ ಇಲಾಖೆ ಪ್ರಕಟಿಸಿದೆ. ಅಂತ್ಯೋದಯ ಕಾರ್ಡ್‌ದಾರರಿಗೆ 29ಕೆ.ಜಿ. ಅಕ್ಕಿ, 6ಕೆ.ಜಿ. ಗೋಧಿ, 1ಕೆ.ಜಿ. ಸಕ್ಕರೆ, ಬಿಪಿಎಲ್ ಕಾರ್ಡ್‌ದಾರರಿಗೆ ಏಕ ಸದಸ್ಯರಿಗೆ 4ಕೆ.ಜಿ ಅಕ್ಕಿ, 1ಕೆ.ಜಿ. ಗೋಧಿ, 1ಕೆ.ಜಿ. ಸಕ್ಕರೆ, ದ್ವಿ ಸದಸ್ಯರಿಗೆ 8ಕೆ.ಜಿ. ಅಕ್ಕಿ, 1ಕೆ.ಜಿ. ಗೋಧಿ, 1ಕೆ.ಜಿ. ಸಕ್ಕರೆ, ಮೂವರು ಸದಸ್ಯರಿಗೆ 12ಕೆ.ಜಿ. ಅಕ್ಕಿ, 1ಕೆ.ಜಿ. ಗೋಧಿ, 1ಕೆ.ಜಿ. ಸಕ್ಕರೆ, ನಾಲ್ಕು ಸದಸ್ಯರಿಗೆ 15ಕೆ.ಜಿ. ಅಕ್ಕಿ, 2ಕೆ.ಜಿ. ಗೋಧಿ, 1ಕೆ.ಜಿ. ಸಕ್ಕರೆ, ಐದು ಮತ್ತು ಹೆಚ್ಚು ಸದಸ್ಯ ಕಾರ್ಡ್‌ದಾರರಿಗೆ 15ಕೆ.ಜಿ. ಅಕ್ಕಿ, 3ಕೆ.ಜಿ. ಗೋಧಿ, 1ಕೆ.ಜಿ. ಸಕ್ಕರೆ ಹಾಗೂ ಅನಿಲ ರಹಿತ ಪಡಿತರ ಚೀಟಿದಾರರಿಗೆ 4ಲೀ. ಸೀಮೆಎಣ್ಣೆ ನೀಡಲಾಗುವುದೆಂದು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.