ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಗುಡ್ಡೇಕೊಪ್ಪ ಗ್ರಾ.ಪಂ ಉಪಚುನಾವಣೆ ಅಧಿಸೂಚನೆ

Lingaraj Badiger
Updated On : 18 Jun 2013, 11:19 am

ಶಿವಮೊಗ್ಗ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ನಾಲ್ಕು ಸದಸ್ಯರ ಸ್ಥಾನಗಳನ್ನು ಚುನಾವಣೆ ಮೂಲಕ ಭರ್ತಿ ಮಾಡುವ ಸಲುವಾಗಿ ಜಿಲ್ಲಾ ಚುನಾವಣಾ ಶಾಖೆಯು ವೇಳಾಪಟ್ಟಿ ಪ್ರಕಟಿಸಿದೆ.
ಈ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರು ಜೂನ್ 19ರಂದು ಅಧಿಸೂಚನೆ ಹೊರಡಿಸುವರು. ಉಮೇದುವಾರರು ನಾಮಪತ್ರ ಸಲ್ಲಿಸಲು ಜೂನ್ 26 ಕೊನೆಯ ದಿನ. ಜೂನ್ 27ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 29ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ. ಜುಲೈ 7ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಈ ಚುನಾವಣೆಯ ಮತ ಎಣಿಕೆಯನ್ನು ಜುಲೈ 10ರಂದು ಬೆಳಿಗ್ಗೆ 8 ಗಂಟೆಯಿಂದ ತೀರ್ಥಹಳ್ಳಿಯ ತಾಲೂಕು ಕಚೇರಿಯಲ್ಲಿ ನಡೆಸಲಾಗುವುದು. ಈ ಚುನಾವಣೆಗೆ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ಗುರುತಿನ ಬಗ್ಗೆ ಚುನಾವಣಾ ಆಯೋಗವು ಪ್ರಕಟಿಸಿರುವ 21 ದಾಖಲಾತಿಗಳಲ್ಲಿ ಯಾವುದಾದರೊಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದು.
ಹೆಚ್ಚಿನ ವಿವರಗಳಿಗಾಗಿ ತೀರ್ಥಹಳ್ಳಿ ತಹಸೀಲ್ದಾರರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸಕ್ತ ಸಾಲಿನ ಉದ್ಯೋಗಿನಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಆರಂಭಿಸಲಿಚ್ಚಿಸುವ ಮಹಿಳೆಯರಿಂದ ಸಾಲ- ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. ಸಾಲ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲಿಚ್ಛಿಸುವ ಮಹಿಳೆಯರು ಭದ್ರಾವತಿ ತಾಲೂಕಿನವರಾಗಿದ್ದು, 18ರಿಂದ 45 ವರ್ಷ ವಯೋವುತಿಯೊಳಗಿನವರಾಗಿರಬೇಕು. ಅರ್ಜಿಯನ್ನು ಭದ್ರಾವತಿಯ ತರೀಕೆರೆ ರಸ್ತೆಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.6ರೊಳಗಾಗಿ ಸಲ್ಲಿಸಬೇಕು. ಮಾಹಿತಿಗೆ 08282-266384 ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement