ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಚಾಲನಾ ತರಬೇತಿ

Lingaraj Badiger
Updated On : 18 Jun 2013, 11:20 am

ಶಿವಮೊಗ್ಗ: ಸಾರಿಗೆ ಇಲಾಖೆಯು ಪ್ರಸಕ್ತ ಸಾಲಿನ ಎಸ್.ಪಿ.ಸಿ. ಯೋಜನೆಯಡಿಯಲ್ಲಿ  ಶಿವಮೊಗ್ಗ, ಭದ್ರಾವತಿ, ಮತ್ತು ತೀರ್ಥಹಳ್ಳಿ ತಾಲೂಕಿನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ಮೋಟಾರು ವಾಹನ ಚಾಲನ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಟೋರಿಕ್ಷಾ -5, ಲಘು ಮೋಟಾರು ವಾಹನ-21, ಭಾರಿ ಸಾರಿಗೆ ವಾಹನ-7 ಸೇರಿದಂತೆ ಒಟ್ಟು 33 ಅಭ್ಯರ್ಥಿಗಳಿಗೆ ವಾಹನ ಚಾಲನಾ ತರಬೇತಿ ನೀಡಲಾಗುವುದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ವೆಚ್ಚದ ಶೇ.75ರಷ್ಟು ವೆಚ್ಚವನ್ನು ಇಲಾಖಾ ವತಿಯಿಂದ ಭರಿಸಲಾಗುವುದು. ಅರ್ಜಿಯನ್ನು ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ 15ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವತಿ ನಾಪತ್ತೆ
ಶಿವಮೊಗ್ಗ: ಸೊರಬ ತಾಲೂಕು ಆನವಟ್ಟಿಯ ಬ್ರಾಹ್ಮಣರ ಬೀದಿ ಮಸೀದಿ ಹತ್ತಿರದ ಮೆಹರುನ್ ಕೋಂದಡ್ಡಿ ರಾಜಾಸಾಬ್ ಮಗಳಾದ ಪರವಿನ್ (18ವರ್ಷ) ಜೂನ್ 16ರಂದು ಕಾಣೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕೆಂಪು ಮೈಬಣ್ಣ, ಕನ್ನಡ, ಉರ್ದು ಮಾತನಾಡುತ್ತಾರೆ. ಕೆಂಪು ಕಲರ್ ಸಾದಾ ಚೂಡಿದಾರ್ ಧರಿಸಿರುತ್ತಾರೆ. ಕಾಣೆಯಾಗಿರುವವರ ಸುಳಿವು ದೊರೆತಲ್ಲಿ ಆನವಟ್ಟಿ ಠಾಣೆ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments