ನಾಳೆ ವಿಚಾರ ಸಂಕಿರಣ
ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರವು ಕೇರಳದ ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯದ ಸಹಯೋಗದೊಂದಿಗೆ ಜೂನ್ 19ರಂದು ಬೆಳಿಗ್ಗೆ 10.30ಕ್ಕೆ ಸಾಗರದ ಎಸ್.ಆರ್. ಬಾಪಟ್ ಸಭಾ ಭವನದಲ್ಲಿ ಗೇರು ಬೆಳೆಯ ಸುಧಾರಿತ ಉತ್ಪಾದನಾ ತಾಂತ್ರಿಕತೆ ಕುರಿತು ವಿಚಾರ ಸಂಕಿರಣ ಏರ್ಪಡಿಸಿದೆ.
ಕಾರ್ಯಕ್ರಮವನ್ನು ಸಭಾಪತಿ ಕಾಗೋಡು ತಿಮ್ಮಪ್ಪ ಉದ್ಘಾಟಿಸುವರು. ಡಾ. ಪಿ.ಎಂ. ಸಾಲಿಮಠ ಅಧ್ಯಕ್ಷತೆ ವಹಿಸುವರು. ಕೊಚ್ಚಿನ್ ಗೇರು ಮತ್ತು ಕೋಕೋ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಡಾ. ವೆಂಕಟೇಶ್ ಎನ್. ಹುಬ್ಬಳ್ಳಿ, ಸಂಶೋಧನ ನಿರ್ದೇಶಕ ಡಾ.ಬಿ. ಸತ್ಯನಾರಾಯಣ ರೆಡ್ಡಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ.ಎಂ. ವಿಶ್ವನಾಥ್, ಕೃಷಿ ಮಹಾ ವಿದ್ಯಾಲಯದ ಡೀನ್ ಡಾ.ಎಂ. ಮಂಜುನಾಥ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.