ನಾಳೆ ವಿಶ್ವ ಪರಿಸರ ದಿನಾಚರಣೆ
ಶಿವಮೊಗ್ಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಪರಿಸರ ಅಧ್ಯಯನ ಕೇಂದ್ರ, ಸಂತೇಕಡೂರು ಆಶ್ರಯದಲ್ಲಿ ಜೂನ್ 21ರಂದು ಮಧ್ಯಾಹ್ನ 3ಗಂಟೆಗೆ ನಗರದ ಡಿವಿಎಸ್ ರಂಗಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಘಾಟಿಸುವರು. ಹಿರಿಯ ಪರಿಸರ ಅಧಿಕಾರಿ ಸಿ.ಎಂ. ಸತೀಶ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಡಿ.ಪಿ. ಚಂದ್ರಮ್ಮ ಪಾಲ್ಗೊಳ್ಳುವರು. ವಿಜೇತರಾದ ಸ್ಪರ್ಧಾಳುಗಳಿಗೆ ಕಿಡ್ಸ್ ಮತ್ತು ಜ್ಞಾನಸಾಗರ ನಾವೆ ಟ್ರಸ್ಟ್‌ನ ಅಧ್ಯಕ್ಷ ಸಿ. ಎಸ್. ಚಂದ್ರಶೇಖರ್ ಅವರು ಬಹುಮಾನ ವಿತರಿಸುವರು. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ವೈ.ಎಸ್. ಹರಿಶಂಕರ್, ಪಿ. ಲಕ್ಷ್ಮಣ್, ಜಿ.ಎಲ್. ಜನಾರ್ದನ್ ಅವರು ಉಪಸ್ಥಿತರಿರುವರು.