ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಾಜಪೇಯಿ ಶ್ರೀಯಡಿ ಉತ್ಕೃಷ್ಟ ಚಿಕಿತ್ಸೆ

Lingaraj Badiger
Updated On : 20 Jun 2013, 10:53 am

ಕ.ಪ್ರ.ವಾರ್ತೆ, ಭದ್ರಾವತಿ, ಜೂ.19
ಬಡತನದ ರೇಖೆಗಿಂತ ಕೆಳಗಿರುವ ಜನರ ಕಲ್ಯಾಣಕ್ಕೆಂದು ವಾಜಪೇಯಿ ಆರೋಗ್ಯಶ್ರೀ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ್ದು, ಈ ಯೋಜನೆಯಡಿ ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಆಘಾತಕಾರಿ ಕಾಯಿಲೆಗಳಿಗೆ ಉತ್ಕೃಷ್ಟ ವೈದ್ಯಕೀಯ ಚಿಕಿತ್ಸೆ ಮತ್ತು ವೈದ್ಯಕೀಯ ಸೇವೆ ನೀಡುವುದು ಇದರ ಉದ್ದೇಶವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಗುಡದಪ್ಪ ಕಸಬಿ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗದಲ್ಲಿ ನಂಜಪ್ಪ ಲೈಫ್ ಕೇರ್ ಮತ್ತು ಮಲ್ನಾಡ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಉಚಿತ ಹೃದ್ರೋಗ, ನರರೋಗ ಮತ್ತು ಕ್ಯಾನ್ಸರ್ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡ್ದರು.
ಔಷಧೋಪಚಾರ: ಈ ಯೋಜನೆಯಡಿ ಹೃದಯ ಸಂಬಂಧೀ ಕಾಯಿಲೆ, ಕ್ಯಾನ್ಸರ್, ನರರೋಗ, ಮೂತ್ರಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆ, ಸುಟ್ಟ ಗಾಯ ಮುಂತಾದ ಬಾಧೆಗಳಿಗೆ ವಿಶೇಷ ತಜ್ಞರಿಂದ ಸ್ಪೆಷಾಲಿಯಿ ಆಸ್ಪತ್ರೆಯ ಉಚಿತ ವೈದ್ಯಕೀಯ ತಪಾಸಣೆ ಮತ್ತು ಔಷಧೋಪಚಾರ ಲಭ್ಯವಿರುತ್ತದೆ.  ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹರು ಈ ಯೋಜನೆಯ ಪ್ರಯೋಜನ ಪಡೆಯುವುದರೊಂದಿಗೆ  ಸಮಾಜದಲ್ಲಿ ಇತರರಿಗೂ ಈ ಯೋಜನೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಪ್ರಸ್ತುತ ಶಿಬಿರದಲ್ಲಿ ಹೃದ್ರೋಗ, ನರರೋಗ ಮತ್ತು ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಅವರು ತಿಳಿಸಿದರು.
   ನಂಜಪ್ಪ ಲೈಫ್ ಕೇರ್‌ನ ಹೃದ್ರೋಗ ತಜ್ಞ ಡಾ. ಜೆ. ನರೇಂದ್ರ, ಡಾ. ಅವಿನಾಶ್ ಮತ್ತು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಮತಿ ಮೊದಲಾದವರು ಉಪಸ್ಥಿತರಿದ್ದರು.
   ಶಿಬಿರದಲ್ಲಿ ಸುಮಾರು 270 ರೋಗಿಗಳ ತಪಾಸಣೆ ಮಾಡಲಾಯಿತು ಹಾಗೂ 25 ಮಂದಿಯನ್ನು ಹೆಚ್ಚುವರಿ ಚಿಕಿತ್ಸೆಗಾಗಿ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಗೆ ಬರಲು ಸೂಚಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement