ಕುಂಠಿತಗೊಂಡ ಕಾಮಗಾರಿ ಪೂರ್ಣಮಾಡಲು ಮನವಿ
ಶಿವಮೊಗ್ಗ: ವಿದ್ಯಾನಗರ ಮುಖ್ಯರಸ್ತೆ ಮತ್ತು ಎನ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿ ಕುಂಠಿತಗೊಂಡಿದ್ದು, ತ್ವರಿತಗತಿಯಲ್ಲಿ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕೆಂದು ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಶುಕ್ರವಾರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರನ್ನು ಭೇಟಿಯಾದ ಒಕ್ಕೂಟದ ನಿಯೋಗ ರಸ್ತೆ ಕಾಮಗಾರಿ ಕುಂಠಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.
ವಿದ್ಯಾನಗರ ಮುಖ್ಯರಸ್ತೆ ಮತ್ತು ಎನ್ಟಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸುತ್ತಿದ್ದು, ಹಲವು ದಿನಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ಕುಂಠಿತವಾಗಿ ಸಾಗುತ್ತಿರುವುದರಿಂದ ತೊಂದರೆ ಉಂಟಾಗಿದೆ.