ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಾವಿರಾರು ರು.ಕಳವು

Vishwanath S
Updated On : 23 Jun 2013, 11:46 am

ಶಿವಮೊಗ್ಗ: ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಕಳ್ಳರು ಸಾವಿರಾರು ರುಪಾಯಿ ಕಳುವು ಮಾಡಿರುವ ಘಟನೆ ನಡೆದಿದೆ.
 ಗುರುಪುರದ ರವಿಚಂದ್ರ ಎಂಬವರ ಮನೆಯ ಬೀರುವಿನಲ್ಲಿಟ್ಟಿದ್ದ 91 ಸಾವಿರ ರುಪಾಯಿ ನಗದು ನಾಪತ್ತೆಯಾಗಿದ್ದು, ರವಿಚಂದ್ರ ಅವರು ತಮ್ಮ ಹೆಂಡತಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾಗ ಘಟನೆ ನಡೆದಿದೆ. ಪ್ರಕರಣ ದಾಖಲಾಗಿದೆ.
ಮಾರಕಾಸ್ತ್ರಗಳಿಂದ ಹಲ್ಲೆ
ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಗರದ ಡಿವಿಎಸ್ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ.
ಬಿಸ್ಮಿಲ್ಲಾ ಮಟನ್ ಸ್ಟಾಲ್ ಮಾಲೀಕ ಅಯೂಬ್ (32) ಹಲ್ಲೆಗೀಡಾದ ವ್ಯಕ್ತಿ. ಅಯೂಬ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement