ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮದ್ಯದಂಗಡಿಗೆ ಗ್ರಾಮಸ್ಥರ ವಿರೋಧ

Lingaraj Badiger
Updated On : 25 Jun 2013, 11:48 am

ಕ.ಪ್ರ.ವಾರ್ತೆ  ಶಿವಮೊಗ್ಗ  ಜೂ.24
ನಗರದ ಮಿಳಘಟ್ಟ ಬಡಾವಣೆಯಲ್ಲಿ ಮದ್ಯದಂಗಡಿ ಸ್ಥಾಪನೆ ಮಾಡುವುದನ್ನು ವಿರೋಧಿಸಿ ಮಿಳಘಟ್ಟ ನಿವಾಸಿಗಳು ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಮಿಳಘಟ್ಟ ಬಡಾವಣೆಯಲ್ಲಿ ಹಲವಾರು ವರ್ಷಗಳಿಂದ ವಿವಿಧ ಧರ್ಮ, ಜಾತಿ ಜನಾಂಗದವರು ವಾಸಿಸುತ್ತಿದ್ದಾರೆ. ಅವರಲ್ಲಿ ಬಹುತೇಕ ಕೂಲಿಕಾರ್ಮಿಕರು, ಬಡ ವರ್ಗಕ್ಕೆ ಸೇರಿದವರಾಗಿದ್ದು, ಅಬಕಾರಿ ಇಲಾಖೆ ಬಡಾವಣೆಯಲ್ಲಿನ ಮುಖ್ಯರಸ್ತೆಯಲ್ಲಿರುವ ಮಳಿಗೆಯೊಂದರಲ್ಲಿ ಎಂಎಸ್‌ಐಎಲ್‌ನ ಸಗಟು ಮದ್ಯ ಮಾರಾಟ ಮಳಿಗೆ ತೆರೆಯಲು ಅವಕಾಶ ನೀಡಿರುವುದು ಖಂಡನೀಯ ಎಂದು ನಿವಾಸಿಗಳು ಮನವಿಯಲ್ಲಿ ತಿಳಿಸಿದರು.
ಪ್ರಸ್ತುತ ಮದ್ಯದಂಗಡಿ ಸ್ಥಾಪನೆಗೆ ಅನುಮತಿ ನೀಡಿರುವ ಸ್ಥಳದ ಅಕ್ಕ- ಪಕ್ಕ ಸರ್ಕಾರಿ ಶಾಲೆಗಳು, ದೇವಾಲಯಗಳು, ಮಸೀದಿ, ಚರ್ಚ್‌ಗಳಿದ್ದು, ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿ ತೆರೆಯಲು ಅವಕಾಶ ನೀಡುತ್ತಿರುವುದು ಅಸಮಂಜಸ. ಇದರಿಂದ ಮದ್ಯವಸನಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಅಲ್ಲದೇ ಕೂಲಿ ಕಾರ್ಮಿಕರು ದುಡಿದ ಹಣವನ್ನು ಮದ್ಯಕ್ಕೆ ವ್ಯಯಮಾಡುತ್ತಾರೆ. ಆದರಿಂದ ಮದ್ಯದಂಗಡಿಯ ಲೈಸೆನ್ಸ್ ರದ್ದು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
 ಯಾವುದೇ ಕಾರಣಕ್ಕೂ ಮದ್ಯದಂಗಡಿಯನ್ನು ತೆರೆಯಲು ಅವಕಾಶ ನೀಡಬಾರದು ಎಂದು ಮಿಳಘಟ್ಟ ನಿವಾಸಿಗಳು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ವಾಜೀದ್, ಸಕ್ರಂ, ಸಲೀಂ, ಇರ್ಫಾನ್, ಇಮ್ರಾನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement