28ರಂದು ಅಡಕೆ ವಿಚಾರ ಸಂಕಿರಣ
ಶಿವಮೊಗ್ಗ: ಅಡಕೆ ಬೆಳೆಗಾರರ ಸಮಸ್ಯೆಗಳು ಹಾಗೂ ಪರಿಹಾರ ಮತ್ತು ಡಾ. ಗೋರಖ್ ಸಿಂಗ್ ವರದಿ ಕುರಿತಂತೆ ಶಿವಮೊಗ್ಗ ಜಿಲ್ಲಾ ಅಡಕೆ ಬೆಳೆಗಾರರ ಸಂಘ ವಿಚಾರ ಸಂಕಿರಣವನ್ನು ಆಯೋಜಿಸಿದೆ.
ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಜೂನ್ 28ರಂದು ಬೆಳಿಗ್ಗೆ 10.30ಕ್ಕೆ ವಿಚಾರ ಸಂಕಿರಣಕ್ಕೆ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಭದ್ರಾವತಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಕಾಶ್ ಕಮ್ಮರಡಿ ವಿಚಾರ ಮಂಡನೆ ಮಾಡಲಿದ್ದು, ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಅಡಕೆ ಬೆಳೆಗಾರರು ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳುವಂತೆ ಆಯೋಜಕ ಸಂಘಟನೆ ಕೋರಿದೆ.