ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಕುಂಬಾರರ ಸಂಘ ಎಲ್ಲಾ ತಾಲೂಕುಗಳು ಹಾಗೂ ಚನ್ನಗಿರಿ, ಹೊನ್ನಾಳಿ ತಾಲೂಕುಗಳ ಕುಂಬಾರ ಸಮಾಜ ಬಾಂಧವರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಂಘ ನಿರ್ಧರಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 2012-13ನೇ ಶೈಕ್ಷಣಿಕ ಸಾಲಿನ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಘದ ವಾರ್ಷಿಕ ಸಭೆಯಲ್ಲಿ ಅಭಿನಂದಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಅಂಕ ಪಟ್ಟಿಯ ನಕಲು ಪ್ರತಿಯನ್ನು ಬಸವರಾಜಪ್ಪ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕುಂಬಾರರ ಸಂಘ, 1ನೇ ಕ್ರಾಸ್ ಬಸವೇಶ್ವರ ನಗರ, ಶಿವಮೊಗ್ಗ ಇಲ್ಲಿಗೆ ಕಳುಹಿಸಬಹುದು ಎಂದು ಬಸವರಾಜಪ್ಪ ತಿಳಿಸಿದ್ದಾರೆ. ವಿವರಗಳಿಗಾಗಿ- 9742795485.