ನಾಳೆ ಕುಂದುಕೊರತೆ ಸಭೆ
ಶಿವಮೊಗ್ಗ: ಪೊಲೀಸ್ ಇಲಾಖೆಯು ಜೂನ್ 29ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಿ.ಎ.ಆರ್. ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿದೆ.
ಜಿಲ್ಲೆಯ ಯಾವುದೇ ಸ್ಥಳದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಂದು ನಡೆಯುವ ಸಭೆಯಲ್ಲಿ ಭಾಗವಹಿಸಿ, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಅಥವಾ ಇನ್ನಿತರೆ ಯಾವುದೇ ಸಮಸ್ಯೆಗಳ ಕುರಿತು ಚರ್ಚಿಸಿ, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.