ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಉಪನ್ಯಾಸ

Rashmi Kasaragodu
Updated On : 30 Jun 2013, 12:28 pm

ಭದ್ರಾವತಿ: ಪಟ್ಟಣದ ಭೂಮಿಕಾ ವೇದಿಕೆಯು ಐರೋಪ್ಯ ದೇಶಗಳ ಜೀವನಶೈಲಿ ಮತ್ತು ಸಾಹಿತ್ಯ ಸಂಸ್ಕೃತಿ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಭಾನುವಾರ ಸಂಜೆ 6 ಗಂಟೆಗೆ ತರೀಕೆರೆ ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಏರ್ಪಡಿಸಿದೆ. ವಿಶ್ವಪರ್ಯಟನೆ ಮಾಡಿ ವಿಶೇಷವಾಗಿ ಐರೋಪ್ಯ ದೇಶಗಳಲ್ಲಿ ವಿಸ್ತೃತ ಪ್ರವಾಸ ಮಾಡಿರುವ ಡಾ. ಎನ್.ಜಿ. ಕೋಟೇಶ್ ಅವರು ಉಪನ್ಯಾಸ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೇದಿಕೆಯ ಕಾರ್ಯದರ್ಶಿ ಶಿವರಾಜ್ ಕೋರಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಆಧಾರ್ ಕಡ್ಡಾಯ
ಶಿವಮೊಗ್ಗ: ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ನೋಂದಣಿ ಸಂಖ್ಯೆ ಇನ್ನು ಕಡ್ಡಾಯವಾಗಲಿದೆ. ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿವೇತನ ಮಂಜೂರು ಮಾಡಲು ವಿದ್ಯಾರ್ಥಿಗಳು ಆಧಾರ್ ಸಂಖ್ಯೆ ಹೊಂದಿರುವುದು ಅಗತ್ಯವಾಗಿದೆ. ವಿದ್ಯಾರ್ಥಿವೇತನ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಆಧಾರ್ ಸಂಖ್ಯೆ ಹೊಂದುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ತೋಟಗಾರಿಕಾ ಇಲಾಖೆಯು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅಡಕೆ ಬೆಳೆಯ ಕೊಳೆ ರೋಗ ನಿಯಂತ್ರಣಕ್ಕಾಗಿ ಮೈಲುತುತ್ತ ಖರೀದಿಸುವ ರೈತರಿಗೆ ಸಹಾಯಧನ ನೀಡಲು ಉದ್ಶಿದೇಸಿದ್ದು, ಅರ್ಹ ತೋಟಗಾರಿಕಾ ಬೆಳೆಗಾರರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಫಲಾನುಭವಿಗೆ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ಶೇ.50ರಷ್ಟು ಅಥವಾ ಗರಿಷ್ಟ 1 ಸಾವಿರ ಸಹಾಯಧನ ನೀಡಲಾಗುವುದು. ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ಬುಕ್ ನಕಲು ಪ್ರತಿ ಹಾಗೂ ಮೈಲುತುತ್ತ ಖರೀದಿಸಿದ ಬಗ್ಗೆ ಟಿನ್ ನಂಬರ್ ಹೊಂದಿರುವ ಬಿಲ್ಲುಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅನುದಾನದ ಲಭ್ಯತೆಯ ಮೇರೆಗೆ ಹಾಗೂ ಜೇಷ್ಠತೆಯ ಆಧಾರದ ಮೇಲೆ ಅರ್ಜಿ ಪರಿಗಣಿಸಿ ಸಹಾಯಧನ ವಿತರಿಸಲಾಗುವುದು.
ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 27ರೊಳಗಾಗಿ ಸಲ್ಲಿಸುವಂತೆ ಹಾಗೂ ವಿವರಗಳಿಗಾಗಿ ಆಯಾ ತಾಲೂಕಿನ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸುವಂತೆ ತೋಟಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments