ಮಕ್ಕಳಿಗೆ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ
ಕ.ಪ್ರ.ವಾರ್ತೆ ಟಿ ಸಾಗರ ಟಿ ಜೂ.29
ಕಸ್ತೂರಬಾ ಆಸ್ಪತ್ರೆ ಹಾಗೂ ಅಂತಾರಾಷ್ಟ್ರೀಯ ಮಕ್ಕಳ ವೈದ್ಯಕೀಯ ಚಾರಿಟಿ ಸಂಸ್ಥೆ ಸಹಯೋಗದೊಂದಿಗೆ ಮಕ್ಕಳಿಗೆ ಉಚಿತ ಸೀಳ್ದುಟಿ ಶಸ್ತ್ರಚಿಕಿತ್ಸಾ ಕಾರ್ಯಾಗಾರವನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಆಗಸ್ಟ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ ಅನಿಲ್ ಜೇಕಬ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಆಸ್ಪತ್ರೆ ವತಿಯಿಂದ ಕಳೆದ 11 ವರ್ಷಗಳಿಂದ ಸೀಳ್ದುಟಿ ಶಸ್ತ್ರಚಿಕಿತ್ಸೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಉಚಿತವಾಗಿ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಂಡಿದ್ದು, ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಆಸ್ಪತ್ರೆಯೆ ಭರಿಸಲಿದೆ. ಶಸ್ತ್ರಚಿಕಿತ್ಸೆಯಲ್ಲಿ ವಿದೇಶದ ಹೆಸರಾಂತ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಸಂಬಂಧಪಟ್ಟಂತೆ ಆಸ್ಪತ್ರೆಯಲ್ಲಿ ಜುಲೈ ತಿಂಗಳಿನಲ್ಲಿ ಚಿಕಿತ್ಸೆಗೆ ಒಳಪಡುವ ರೋಗಿಯನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗುವುದು. ಅಗತ್ಯವಿರುವವರು ಮಕ್ಕಳ ವಿಭಾಗ (0820 2922209), ಮಕ್ಕಳ ಶಸ್ತ್ರ ಚಿಕಿತ್ಸಾ ವಿಭಾಗ (0820 2922116) ಸಂಪರ್ಕಿಸಬಹುದು ಎಂದರು.
ರಾಜ್ಯಾದ್ಯಂತ 2 ಲಕ್ಷ ಮಣಿಪಾಲ ಕಾರ್ಡ್ ನೋಂದಾಯಿಸಿರುವ ಗುರಿ ಹೊಂದಲಾಗಿತ್ತು. ಈವರೆಗೆ 80 ಸಾವಿರ ಕಾರ್ಡ್ದಾರರು ನೋಂದಣಿ ಮಾಡಿಸಿಕೊಂಡಿದ್ದಾರೆ. ಹಿಂದಿನ ಸಾಲಿಗಿಂತ ಈ ಬಾರಿ ಹೆಚ್ಚು ಜನರು ಆರೋಗ್ಯ ಕಾರ್ಡ್ಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಹಿಂದೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಜೂ.30 ಕೊನೆ ದಿನವಾಗಿತ್ತು. ಅದನ್ನು ಜುಲೈ 30ಕ್ಕೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕೃಷಿಕ್ ಸೌಹಾರ್ದ ಬ್ಯಾಂಕಿನ ಸುಬ್ಬಣ್ಣ ಹಾಜರಿದ್ದರು.