ಚುನಾವಣೆ: ನಾಳೆ ಪಾನ ನಿಷೇಧ
ಶಿವಮೊಗ್ಗ: ಮಾರ್ಚ್ 7ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಹಾಗೂ ಮಾರ್ಚ್ 11ರಂದು ನಡೆಯಲಿರುವ ಮತ ಎಣಿಕೆ ಸಂದರ್ಭದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ವ್ಯಾಪಾರ ನಿಷೇಧಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಮುಕ್ತ, ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಸಲು, ಚುನಾವಣಾ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುವ ಸ್ಥಳೀಯ ಸಂಸ್ಥೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ 3 ಕಿ.ಮೀ. ವ್ಯಾಪ್ತಿಯಲ್ಲಿ ಮಾರ್ಚ್ 6ರ ಬೆಳಗ್ಗೆ 7 ಗಂಟೆಯಿಂದ ಮಾರ್ಚ್ 7ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆ ದಿನವಾದ ಮಾರ್ಚ್ 11ರ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಎಲ್ಲಾ ರೀತಿಯ ಮದ್ಯ ವ್ಯಾಪಾರ, ಸಾಗಾಣಿಕೆ, ಸಂಗ್ರಹಣೆಯನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಆದೇಶ ಹೊರಡಿಸಿದ್ದಾರೆ.ಸೇನಾ ಕುಟುಂಬಕ್ಕೆ ಪಿಂಚಣಿ
ಶಿವಮೊಗ್ಗ: ಸೈನ್ಯದಿಂದ ಬಿಡುಗಡೆ ಹೊಂದಿದ ನಂತರ ರಾಜ್ಯ ಅಥವಾ ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸಿದ್ದು, ಪಿಂಚಣಿ ಪಡೆಯುತ್ತಿದ್ದ ಮಾಜಿ ಸೈನಿಕರ ವಿಧವೆಯರು ಹಾಗೂ ಅವಲಂಬಿತರು ಸೈನ್ಯದ ಮತ್ತು ನಂತರ ಸೇವೆ ಸಲ್ಲಿಸಿದ ಇಲಾಖೆ ಎರಡು ಪಿಂಚಣಿಯನ್ನು ಪಡೆಯಬಹುದಾಗಿದೆ. ಮಾಹಿತಿಗೆ ಸೈನಿಕ ಕಲ್ಯಾಣ ಇಲಾಖೆ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದು.08182 -220925.