ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಚುನಾವಣೆಗೆ ತಾಲೂಕು ಆಡಳಿತ ಸಿದ್ಧ

Lingaraj Badiger
Updated On : 7 Mar 2013, 10:39 am

ಸಾಗರ: ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ಚುನಾವಣೆ ನಡೆಸಲು ತಾಲೂಕು ಆಡಳಿತ ಪೂರ್ಣ ಸಿದ್ಧತೆ ನಡೆಸಿಕೊಂಡಿದೆ ಎಂದು ಉಪ ವಿಭಾಗಾಧಿಕಾರಿ ಡಾ.ಬಿ. ಉದಯಕುಮಾರ ಶೆಟ್ಟಿ ಹೇಳಿದರು.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಚುನಾವಣೆ ಕರ್ತವ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವವರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ, ಚುನಾವಣೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ನೀತಿ ಸಂಹಿತೆಯನ್ನು ಮೀರುವವರು ಯಾವುದೆ ಪಕ್ಷದವರಾದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಮತದಾನ ಮಾಡುವಾಗ ಆಯೋಗ ನಿಗದಿಪಡಿಸಿದ 19 ಗುರುತಿನ ಪತ್ರದ ಪೈಕಿ ಯಾವುದಾದರೂ ಒಂದನ್ನು ಹಾಜರುಪಡಿಸುವುದು ಕಡ್ಡಾಯ ಎಂದ ಅವರು, ಗುರುತಿನಪತ್ರ ತರದವರಿಗೆ ಮತದಾನ ಮಾಡಲು ಅವಕಾಶ ನೀಡಬೇಡಿ ಎಂದು ಹೇಳಿದರು.  ಸಾಗರ ನಗರಸಭೆ ವ್ಯಾಪ್ತಿಯಲ್ಲಿ 42 ಮತಗಟ್ಟೆಯಿದ್ದು, ಅವುಗಳಲ್ಲಿ 9 ಸೂಕ್ಷ್ಮ, 7 ಅತಿ ಸೂಕ್ಷ್ಮ ಹಾಗೂ 26 ಸಾಮಾನ್ಯ ಎಂದು ಗುರುತಿಸಲಾಗಿದೆ.
   ರಾಜಕೀಯ ಪಕ್ಷದವರು ಚುನಾವಣಾ ಆಯೋಗ ರೂಪಿಸಿರುವ ನಿಯಮಾವಳಿಗಳನ್ನು ಅನುಸರಿಸಬೇಕು. ಚುನಾವಣೆಯನ್ನು ಶಾಂತಿಯುತವಾಗಿ ನಡೆಯಲು ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕಾರ ನೀಡಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement