ಶಿಕಾರಿಪುರ: ಶೇ.72 ಮತದಾನ
ಕ.ಪ್ರ.ವಾರ್ತೆ, ಶಿಕಾರಿಪುರ,ಮಾ.7
ಪಟ್ಟಣದ ಪುರಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇ.72 ಮತದಾನ ನಡೆದಿದೆ. ಬಹುತೇಕ ಶಾಂತರೀತಿಯಲ್ಲಿ ಮುಕ್ತಾಯಗೊಂಡಿದೆ. ಹಲವೆಡೆ ಮತದಾರ ಪಟ್ಟಿಯಲ್ಲಿನ ಲೋಪದಿಂದಾಗಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಕೆಲ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿಯುವಂತಾಯಿತು.
ಯಡಿಯೂರಪ್ಪ ಮತದಾನ: ಬೆಳಿಗ್ಗೆ ಆರಂಭವಾದ ಮತದಾನದ ಪ್ರಕ್ರಿಯೆಯಲ್ಲಿ ದೊಡ್ಡಪೇಟೆ, ಚನ್ನಕೇಶವ ನಗರ, ಜಯನಗರ ಮತ್ತಿತರ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಬಹು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದರು.
ಪಟ್ಟಣದ ಸೊಸೈಟಿ ಕೇರಿ, ದೇವರಾಜ ಅರಸ್ ನಗರ ಮತ್ತಿತರ ಕಡೆಗಳಲ್ಲಿ ಮತದಾರ ಪಟ್ಟಿಯಲ್ಲಿನ ಲೋಪದಿಂದಾಗಿ ಬಾವಚಿತ್ರವಿಲ್ಲದೆ ಅಂತಿಮವಾಗಿ ಮತದಾನದಿಂದ ಹೊರಗುಳಿಯಬೇಕಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ದೃಶ್ಯ ಸಾಮಾನ್ಯವಾಗಿತ್ತು. ಸಹಜವಾಗಿ ಪಟ್ಟಣದ 14ನೇ ವಾರ್ಡ್ನಲ್ಲಿ ಇದೇ ಪ್ರಥಮ ಬಾರಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ ಚಲಾಯಿಸಿದರು. ಇವರೊಂದಿಗೆ ಪುತ್ರ ಸಂಸದ ರಾಘವೇಂದ್ರ, ವಿಜಯೇಂದ್ರ, ಸೊಸೆ ತೇಜಸ್ವಿನಿ, ಪ್ರೇಮಾ ಮತ್ತಿತರರು ಹಾಜರಿದ್ದು ಮತ ಚಲಾಯಿಸಿದರು.
ಪ್ರಾದೇಶಿಕ ಪಕ್ಷ ಅನಿವಾರ್ಯ: ಮತದಾನದ ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ಹಿಂದಿಗಿಂತ ಇಂದು ಹೆಚ್ಚು ಅವಶ್ಯಕವಾಗಿದೆ. ರಾಜ್ಯದ ನೆಲ, ಜಲ ಉಳಿಸಿಕೊಳ್ಳುವ ದಿಸೆಯಲ್ಲಿ ಪ್ರಾದೇಶಿಕ ಪಕ್ಷ ಸೂಕ್ತವಾಗಿ ಸ್ಪಂದಿಸಲಿದೆ ಎಂದರು.
ಕಳೆದ ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ಜನತಾ ಪಕ್ಷಕ್ಕೆ ಇದು ಪ್ರಥಮ ಚುನಾವಣೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.