ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸದೃಢ ಸಮಾಜಕ್ಕೆ ರಾಜಕೀಯ ಅನಿವಾರ್ಯ

Parashurama
Updated On : 8 Mar 2013, 10:37 am

ಜೋಗ್‌ಫಾಲ್ಸ್: ಸದೃಢ ಸಮಾಜದ ನಿರ್ಮಾಣಕ್ಕೆ ರಾಜಕೀಯ ಅನಿವಾರ್ಯವಾಗಿದೆ. ರಾಜಕೀಯ ಎಂದರೆ ಸಮಾಜ ಸೇವೆಗೆ ಮತ್ತೊಂದು ಹೆಸರು. ಇಂತಹ ಸಮಾಜ ಸೇವೆಯ ಮೂಲಕ ಜನರ ಋಣ ತೀರಿಸಬೇಕಾಗಿರುವುದು ಜನಪ್ರತಿನಿಧಿಗಳ ಕರ್ತವ್ಯ ಕೂಡ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ಅವರು ಇಲ್ಲಿನ ಶ್ರೀ ಮಹಾಗಣಪತಿ ಸಮುದಾಯ ಭವನದಲ್ಲಿ ಜೋಗ್ ಕಾರ್ಗಲ್ ಕಾಂಗ್ರೆಸ್ ಘಟಕದ  ವತಿಯಿಂದ ಇಲ್ಲಿನ ನಿವಾಸಿಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವುದನ್ನು ವಿರೋಧಿಸಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಸ್ವಾರ್ಥಕ್ಕಾಗಿ ರಾಜಕೀಯ: ಇಂದು ರಾಜಕೀಯ ಕಲುಷಿತಗೊಳ್ಳುತ್ತಿದ್ದು ಇದನ್ನೇ ಉದ್ಯಮವನ್ನಾಗಿ ಬಳಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ.  ಇದರಿಂದ ಜನಸೇವೆಯ ಅರ್ಥವೇ ಜನಪ್ರತಿನಿಧಿಗಳಿಗೆ ತಿಳಿಯದೇ ತಮ್ಮ ಸ್ವಾರ್ಥ ಸಾಧನೆಗಾಗಿ ರಾಜಕೀಯವನ್ನು ಬಳಸಿಕೊಳ್ಳುವಂತಾಗಿದೆ. ಸಾಗರ ಶಾಸಕರನ್ನು ಸೋಲಿಸಿಯೇ ತಾವು ರಾಜಕೀಯದಿಂದ ನಿರ್ಗಮಿಸುವುದಾಗಿ ಮಾರ್ಮಿಕವಾಗಿ ನುಡಿದರು. ವಕೀಲ ಕೆ. ದಿವಾಕರ್ ಮಾತನಾಡಿ, ಜನರ ಎಲ್ಲಾ ಸಮಸ್ಯೆಗಳು ಸಮರ್ಪಕವಾಗಿ ಬಗೆಹರಿಯಬೇಕಾದರೆ  ಮುಂದಿನ ಚುನಾವಣೆಯಲ್ಲಿ ಈ ಭಾಗದಲ್ಲಿ ಮತ್ತೊಮ್ಮೆ ಕಾಗೋಡು ತಿಮ್ಮಪ್ಪ ಅವರನ್ನು ಆಯ್ಕೆ ಮಾಡುವುದೊಂದೇ ಉತ್ತಮ ಮಾರ್ಗ ಎಂದು ತಿಳಿಸಿದರು.
   ಈ ಸಂದರ್ಭದಲ್ಲಿ ಶ್ರೀ ಸಿಗಂದೂರೇಶ್ವರಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಎನ್. ಕೃಷ್ಣಮೂರ್ತಿ ಬಿಳಗಲ್ಲೂರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.  
ಕಾರ್ಯಕ್ರಮದಲ್ಲಿ ವೀಣಾ ಬೆಳೆಯೂರು, ಜೋಗ್ ಕಾರ್ಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕೆ.ಸಿ. ಹರೀಶ್‌ಗೌಡ, ಪಿ. ಮಂಜು, ಟಿ. ಸುರೇಶ್, ವಿ. ಸಂತೋಷ್‌ಕುಮಾರ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments