ವಿಜ್ಞಾನದಿಂದ ವಿಶ್ವ ಸಾಧನೆಯ ಪಥದಲ್ಲಿ
ಜೋಗ್ಫಾಲ್ಸ್: ಇಂದು ವಿಜ್ಞಾನದ ಆವಿಷ್ಕಾರಗಳು, ತಂತ್ರಜ್ಞಾನಗಳ ಅಭಿವೃದ್ಧಿಯಿಂದ ವಿಶ್ವವೇ ಸಾಧನೆಯ ಪಥದಲ್ಲಿ ಸಾಗುತ್ತಿದೆ. ಇಂದಿನ ವಿದ್ಯಾರ್ಥಿಗಳು ನೂತನ ವಿಜ್ಞಾನದ ಆವಿಷ್ಕಾರಗಳ ಕುರಿತು ಚಿಂತಿಸಬೇಕಾಗಿದೆ ಎಂದು ಜೋಗ್ ಕಾರ್ಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕೆ.ಸಿ. ಹರೀಶ್ಗೌಡ ತಿಳಿಸಿದರು.
ಅವರು ಇಲ್ಲಿನ ಕ್ರಿಸ್ತಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಿಂತನ ವಿಜ್ಞಾನ ಪ್ರಕಾಶನ ಚಿತ್ರದುರ್ಗದ ವತಿಯಿಂದ ನಡೆಸಿದ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಸಮೂಹ ಸಂಪನ್ಮೂಲ ವ್ಯಕ್ತಿ ಭೂಕೇಶ್ವರಪ್ಪ, ಪಪಂ ಸದಸ್ಯೆ ಆಂಬ್ರೋಜ್ ಮೇರಿ, ಶಾಲಾ ಆಡಳಿತ ಮಂಡಳಿ ಮುಖ್ಯಸ್ಥೆ ಸಿಸ್ಟರ್ ರೀಟಾ ಲೋಬೊ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋವಿಟಾ ಹಾಜರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಆಮೋಸ್ ಸ್ವಾಗತಿಸಿದರು. ಶಾಂತಿ ಲೋಪಿಸ್ ನಿರೂಪಿಸಿ, ನಿತ್ಯಾ ಫರ್ನಾಂಡಿಸ್ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.