ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಫಲಿತಾಂಶ ದಿಕ್ಸೂಚಿಯಲ್ಲ; ಸಂಗಮೇಶ್ವರ

Lingaraj Badiger
Updated On : 15 Mar 2013, 10:23 am

ಭದ್ರಾವತಿ: ನಗರಸಭೆ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಕಾರ್ಯಕರ್ತರು ವಿಚಲಿತರಾಗುವ ಅಗತ್ಯವಿಲ್ಲವೆಂದು ಶಾಸಕ ಬಿ.ಕೆ. ಸಂಗಮೇಶ್ವರ ತಿಳಿಸಿದ್ದಾರೆ.
ಕಾಗ್ರೆಸ್ ಪರಾಜಯವನ್ನು ಸಮರ್ಥಿಸಿಕೊಂಡು ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಇದನ್ನು ತಿಳಿಸಿದ ಸಂಗಮೇಶ್ವರ ಪ್ರಸ್ತುತ ಚುನಾವಣೆಯಲ್ಲಿನ ಕಾರ್ಯಯೋಜನೆಯನ್ನು ಸರಿಪಡಿಸಿಕೊಂಡು ಮುಂದೆ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.
ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿರುವುದನ್ನು ಒಪ್ಪಿಕೊಂಡ ಅವರು ಮತದಾರರ ನಿರ್ಧಾರಕ್ಕೆ ತಾವು ತಲೆಬಾಗುವುದಾಗಿ ತಿಳಿಸಿದರು.
ಈ ಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಲ್ಲ. ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕೆಲವೇ ಮತಗಳ ಅಂತರದಲ್ಲಾ ಪರಾಭವಗೊಂಡಿದ್ದಾರೆ. ಇದರ ಬಗ್ಗೆಯೂ ಪಕ್ಷದ ಮುಖಂಡರೊಂದಿಗೆ ಚರ್ಚಿಸಲಾಗುವುದು ಎಂದು ನುಡಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾದ ನಗರಸಭಾ ಸದಸ್ಯರು, ಕಣ್ಣಪ್ಪ, ವಿಜಯಕುಮಾರ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement