ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

23ರಂದು ತಾಳಗುಪ್ಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Lingaraj Badiger
Updated On : 16 Mar 2013, 10:48 am

ಸಾಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಹೃದಯ ಬಳಗ, ಸೌಮ್ಯಶ್ರೀ ಕೇಬಲ್ ನೆಟ್‌ವರ್ಕ್ ಶಿವಮೊಗ್ಗ ವಾತ್ಸಲ್ಯ ಆಸ್ಪತ್ರೆ, ರೋಟರಿ ರಕ್ತನಿಧಿ ಕೇಂದ್ರದ ವತಿಯಿಂದ ಮಾ. 23ರಂದು ತಾಳಗುಪ್ಪದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ರಕ್ಷಕ ಸೇವಾ ಟ್ರಸ್ಟಿನ ಉದ್ಘಾಟನೆ ಹಾಗೂ ಸಾಮಾಜಿಕ ಕಾರ್ಯಕರ್ತ ಕೆ.ಆರ್. ಗಂಗಾಧರ್ ಅವರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ವಿತರಣಾ ಕಾರ್ಯಕ್ರಮ ನಡೆಯಲಿದೆ. ಆರೋಗ್ಯ ತಪಾಸಣೆ ಶಿಬಿರದಲ್ಲಿ ಮೂಳೆ ತಜ್ಞರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು ಸೇರಿದಂತೆ ಅನೇಕ ವೈದ್ಯರು ಪಾಲ್ಗೊಳ್ಳಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ಪಿ.ಎಂ. ರಾಘವೇಂದ್ರ (ಮೊ.9482913720), ಜಗನ್ನಾಥ್ (ಮೊ.9448870081), ದೇವರು ಆರ್. ಭಟ್ 9482758447 ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement