ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಬ್ದುಲ್ ಕಲಾಂ ಕ್ರಿಕೆಟ್ ಸ್ಟೇಡಿಯಂ ಲೋಕಾರ್ಪಣೆ

Lingaraj Badiger
Updated On : 16 Mar 2013, 10:47 am

ಕ.ಪ್ರ ವಾರ್ತೆ, ಶಿವಮೊಗ್ಗ, ಮಾ.15
ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೂತನವಾಗಿ ನಿರ್ಮಿಸಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ  ಕ್ರಿಕೆಟ್ ಸ್ಟೇಡಿಯಂ ಶುಕ್ರವಾರ ಲೋಕಾರ್ಪಣೆಗೊಂಡಿತು. ಅಂತರರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರ ಪದ್ಮಶ್ರೀ ಪುರಸ್ಕೃತ ಸೈಯದ್ ಎಂ.ಎಚ್. ಕಿರ್ಮಾನಿ ಸ್ಟೇಡಿಯಂ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇಲ್ಲಿನ ಕ್ರಿಕೆಟ್ ಕ್ರೀಡಾಂಗಣ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮನಸ್ಸು ಮಾಡಿದರೆ ಇಲ್ಲಿಯೂ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿಸಬಹುದು ಎಂದರು.
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಿನಲ್ಲಿ ಕ್ರೀಡಾಂಗಣ ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಸಂಸ್ಥೆ ಪ್ರೋತ್ಸಾಹ ನೀಡಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಆಗಬಹುದು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಗುರಿ ಎಂಬುದು ಮುಖ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮತ್ತು ಕ್ರೀಡೆ ಎರಡನ್ನು ಸಮತೋಲನವಾಗಿ ನಿಭಾಯಿಸಿಕೊಂಡು ಹೋಗುವುದನ್ನು ಕಲಿಯಬೇಕು ಎಂದರು.
ಮಾಜಿ ಕ್ರಿಕೆಟ್ ಆಟಗಾರ ಆರ್. ವಿಜಯ್ ಭಾರಧ್ವಾಜ್, ನಗರದ ಜೆಎನ್‌ಸಿಸಿ ಮತ್ತು ಪಿಇಎಸ್ ಶಿಕ್ಷಣ ಸಂಸ್ಥೆಗಳಂತೆ ಇತರೆ ಸಂಸ್ಥೆಗಳು ಕ್ರಿಕೆಟ್‌ಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಾದರೆ ಕ್ರಿಕೆಟ್‌ಗೆ ಕೆಎಸ್‌ಸಿಎನಿಂದ ಮತಷ್ಟೂ ಬೆಂಬಲ ನೀಡಲಾಗುವುದು.
ಅಲ್ಲದೆ ಕೆಎಸ್‌ಸಿಎನಿಂದ ಎರಡು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಕೂಡ ನಿರ್ಮಿಸಲಾಗಿದೆ ಎಂದರು.  ಕಾರ್ಯಕ್ರಮದಲ್ಲಿ ಸಂಸದ ಬಿ. ವೈ. ರಾಘವೇಂದ್ರ, ಪ್ರಾಂಶುಪಾಲ ಡಾ. ಸುರೇಶ್‌ಚಂದ್ರ ಮೋಹನ್, ಸೆಂಥಿಲ್, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement