ಇಂದು ನ್ಯಾಯಾಲಯ ಉದ್ಘಾಟನೆ
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಮಾ.15ರಂದು ಇಲ್ಲಿಯ ಕೋರ್ಟ್ ಸಂಕೀರ್ಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ, ಎನ್.ಕೆ. ಪಾಟೀಲ್ ನ್ಯಾಯಾಲಯದ ಉದ್ಘಾಟನೆ ನೆರವೇರಿಸವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್. ಎಂ. ಶೆಟ್ಟರ ಸಮಾರಂಭದ ಅಧ್ಯಕ್ಷತೆ ವಹಿಸುವರು. ತೀರ್ಥಹಳ್ಳಿಯ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಹೆಚ್.ಎಂ. ಮೋಹನ್ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ತೀರ್ಥಹಳ್ಳಿಯ ಹೊಸ ನ್ಯಾಯಾಲಯದ ಕಟ್ಟಡಗಳ ಸಮುಚ್ಚಯದ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಕೂಡಾ ಯಡೇಹಳ್ಳಿಯಲ್ಲಿ ನೆರವೇರಲಿದೆ.
ತೀರ್ಥಹಳ್ಳಿ ವಕೀಲರ ಸಂಘದ ಅಧ್ಯಕ್ಷ ಎಸ್.ವಿ. ಲೋಕೇಶ್ ಸರ್ವರನ್ನೂ ಸ್ವಾಗತಿಸಿದ್ದಾರೆ.