ವಿದ್ಯುತ್ಗಾಗಿ ಅಹೋರಾತ್ರಿ ಪ್ರತಿಭಟನೆ
ಶಿರಾಳಕೊಪ್ಪ: ಕಳೆದ ಮೂರು ದಿನಗಳಿಂದ ನಿರಂತರ ವಿದ್ಯುತ್ ಕಡಿತವಾಗಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸಮೀಪದ ಬಳ್ಳೀಗಾವಿ ಬಳಿಯ 220 ಕೆವಿ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಶುಕ್ರವಾರ ಸಂಜೆಯಿಂದ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಅಲ್ಲದೆ ಅಧಿಕಾರಿಗಳ ಮೇಲೆ ಒತ್ತಡ ತಂದು ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಬಂದಿರುವ ಗ್ರಾಮಸ್ಥರು ಸ್ಥಳದಲ್ಲೇಯೇ ಮೊಕ್ಕಾಂ ಹೂಡಿ ಕೇಂದ್ರದ ಕಚೇರಿ ಎದುರಿನಲ್ಲಿಯೇ ಅಡುಗೆ ಮಾಡಿಕೊಂಡು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಇದರಿಂದಾಗಿ ಶುಕ್ರವಾರ ಸಂಜೆಯಿಂದ ಶಿಕಾರಿಪುರ ತಾಲೂಕಿನ ಬಹುತೇಕ ಭಾಗ ಹಾಗೂ ಸೊರಬ ತಾಲೂಕಿನಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಸ್ಥಳಕ್ಕೆ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ, ಶಿರಾಳಕೊಪ್ಪ ಠಾಣೆ ಎಸ್ಸೈ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಫಲ ನೀಡಲಿಲ್ಲ. ಪ್ರತಿಭಟನೆ ಮುಂದುವರಿದಿದೆ.