ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅತ್ಯಾಚಾರ ಪ್ರಕರಣ ಖಂಡನೀಯ

Parashurama
Updated On : 17 Mar 2013, 10:51 am

ಕ.ಪ್ರ. ವಾರ್ತೆ, ಶಿವಮೊಗ್ಗ, ಮಾ.16
ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರಗಳಂತಹ ಪ್ರಕರಣಗಳು ಮಹಿಳೆಯರನ್ನು ಭಯಭೀತರನ್ನಾಗಿಸಿವೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾರದಾ ಪೂರ್ಯನಾಯ್ಕ ಹೇಳಿದರು.
ನಿರ್ಮಲಾ ಸೇವಾ ಕೇಂದ್ರ, ನಿರ್ಮಲ ಮಹಿಳಾ ಮಂಡಳಿಗಳ ಒಕ್ಕೂಟ ಹಾಗೂ ಚಿಕ್ಕ ಒಕ್ಕೂಟಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು, ದೇಶ, ರಾಜ್ಯಗಳಲ್ಲಿ ಆತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಿಳೆಯರು, ಮಹಿಳಾ ಸಂಘಟನೆಗಳು ಕಾರ್ಯಪ್ರವೃತ್ತರಾಗಿ ಒಟ್ಟಾಗಿ ತಮ್ಮ ಸಬಲೀಕರಣಕ್ಕೆ ದುಡಿಯಬೇಕಿದೆ ಎಂದರು.
ಅನುಪಾತ ಉಂಟಾಗಿದೆ: ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಸಬಲರಾಗುತ್ತಿರುವುದು ಸಂತಸ ತಂದಿದೆ. ಆದರೆ, ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಆತ್ಯಾಚಾರ, ಹೆಣ್ಣು ಭ್ರೂಣ ಹತ್ಯೆಗಳಂತಪ ಪ್ರಕರಣಗಳಿಗೆ ಮಹಿಳೆಯರ ಆತ್ಮಸ್ಥೈರ್ಯವಮನ್ನು ಕುಗ್ಗಿಸಿವೆ. ಅಲ್ಲದೇ, ಸರ್ಕಾರ ಇಂತಹ ಕೃತ್ಯಗಳಿಗೆ ವಿಶೇಷ ಕಾನೂನುಗಳನ್ನು ಜಾರಿಗೊಳಿಸಿದರೂ, ತಡೆಯಲು ಸಾಧ್ಯವಾಗದಿರುವುದು ಬೇಸರ ತಂದಿದೆ. ಆದ್ದರಿಂದ ದೇಶದಲ್ಲಿ ಮಹಿಳೆ ಮತ್ತು ಪುರುಷರ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ತಿಳಿಸಿದರು.
ಈ ರೀತಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಮಹಿಳೆಯರೇ ಖಂಡಿಸಬೇಕು. ಸರ್ಕಾರ ಮಹಿಳೆಯರ ಹಿತಕ್ಕಾಗಿ ಸೂಕ್ತ ಕಾನೂನು ಜಾರಿಗೊಳಿಸಬೇಕು ಎಂದ ಅವರು, ಗ್ರಾಮೀಣ ಮಹಿಳೆಯರು ಕೃಷಿಯ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಿದಲ್ಲಿ ಆರ್ಥಿಕವಾಗಿ ಸದೃಢರಾಗಬಹುದು. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ನೀಡುವ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸಂಘಟನೆ ಸಹಕಾರಿ: ಇಂದಿನ ಮಹಿಳಾ ಸಂಘಗಳು ಮಹಿಳೆಯರನ್ನು ಸಂಘಟಿಸಲು ಸಹಕಾರಿಯಾಗಿವೆ. ಮಹಿಳೆಯ ಕಷ್ಟ ಸುಖಗಳಿಗೆ ಮಹಿಳೆಯರೇ ಸ್ಪಂದಿಸುತ್ತಿದ್ದಾರೆ. ಮಹಿಳೆಯರನ್ನು ಸದೃಢಗೊಳಿಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವವಾದದ್ದು ಎಂದರು.
   ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಮಹಿಳಾ ಜಾಗೃತಿ ಜಾಥಾ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸೇಕ್ರೇಡ್ ಹಾರ್ಟ್ ಪ್ರಧಾನಾಲಯದ ಫಾದರ್ ಏಸುರಕ್ಷಕನಾಧನ್, ಸೌಮ್ಯಾ ಬನ್ಸಾಲ್, ಸ್ವಾತಿ ಕೌಶಲೇಂದ್ರಕುಮಾರ್, ಸಿಸ್ಟರ್ ಡೇಮಿಯನ್, ಸಿಸ್ಟರ್ ಜ್ಯೂಲಿಯೆಟ್, ಉಪನ್ಯಾಸಕಿ ಪ್ರೊ. ಕಿರಣ್ ದೇಸಾಯಿ, ವಿದ್ಯಾಭಾರತಿ, ಧನಲಕ್ಷ್ಮೀ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments