ಇಂದು ಬಿಜೆಪಿ ವಿಜಯ ಸಂಕಲ್ಪ ಸಮಾವೇಶ
ಕ.ಪ್ರ ವಾರ್ತೆಶಿವಮೊಗ್ಗಮಾ. 23
ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಆಯೋಜಿಸಿರುವ ವಿಜಯ ಸಂಕಲ್ಪ ಸಮಾವೇಶ ನಗರದ ಎನ್‌ಇಎಸ್ ಮೈದಾನದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಲಿರುವ ಪ್ರಹ್ಲಾದ್ ಜೋಷಿ ಅವರನ್ನು ಮಹಾವೀರ ವೃತ್ತದಿಂದ ತೆರೆದ ವಾಹನದಲ್ಲಿ ಮಂಗಳವಾದ್ಯದೊಂದಿಗೆ ಕಾರ್ಯಕರ್ತರ ಸಮೂಹ ಸಮಾವೇಶದ ವೇದಿಕೆಗೆ ಕರೆತರಲಿದ್ದಾರೆ.
ಸಮಾವೇಶದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ ಅಧ್ಯಕ್ಷತೆ ವಹಿಸುವರು.
ಜಿಲ್ಲೆಯ ಹಲವು ಮುಖಂಡರು ಭಾಗವಹಿಸುವರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಸ್. ದತ್ತಾತ್ರಿ, ವಾಲೆಮನೆ ಶಿವಕುಮಾರ್ ಕೋರಿದ್ದಾರೆ.