ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಿಡಿ ಸುದ್ದಿ

Mainashree
Updated On : 24 Mar 2013, 10:33 am

ಪಡಿತರ ಚೀಟಿಗೆ ಅರ್ಜಿ: ಸೂಚನೆ
ಶಿವಮೊಗ್ಗ:
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಬರುವ ಆಹಾರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಹೊಸದಾಗಿ ಪಡಿತರ ಚೀಟಿಗೆ ಹಾಗೂ 2010ರ ಪೂರ್ವದಲ್ಲಿ ಕೋಮ್ಯಾಟ್ ಸಂಸ್ಥೆಯಿಂದ ನೀಡಿದ ಕಾಯಂ ಪಡಿತರ ಚೀಟಿಗಳಿಗೆ ಆನ್‌ಲೈನ್‌ನಲ್ಲಿ ಬಯೋವುಟ್ರಿಕ್ ಕಾರ್ಡು ನೀಡುವಾಗ ಅರ್ಜಿದಾರರಿಂದ ಸರ್ಕಾರ ನಿಗದಿಪಡಿಸಿದ ದರ 50 ಕ್ಕಿಂತ ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುತ್ತಿರುವ ಬಗ್ಗೆ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಗ್ರಾಹಕರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ಪಾವತಿಸಬಾರದು. ಒಂದು ವೇಳೆ ಸಂಬಂಧಪಟ್ಟ ಸೇವಾ ಕೇಂದ್ರದವರು ಅರ್ಜಿದಾರರಿಂದ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆದಲ್ಲಿ ಲಿಖಿತವಾಗಿ ದೂರನ್ನು ಸಹಾಯಕ ನಿರ್ದೇಶಕರು, ಅನೌಪಚಾರಿಕ ಪಡಿತರ ಪ್ರದೇಶ, ಗೋಪಾಳ, ಶಿವಮೊಗ್ಗ ಅಥವಾ ಉಪನಿರ್ದೇಶಕರ ಕಚೇರಿ, ಅಹಾರ ಶಾಖೆ ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿ
ಶಿವಮೊಗ್ಗ:
ಏಪ್ರಿಲ್ 2013ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಏಪ್ರಿಲ್ 1ರಿಂದ 10ರ ವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ 90 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಿರಲು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement