ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಶ್ವಿನಿಗೆ ಚಿನ್ನದ ಪದಕ

Rashmi Kasaragodu
Updated On : 26 Mar 2013, 10:22 am

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅಶ್ವಿನಿಯವರು ಕುವೆಂಪು ವಿಶ್ವವಿದ್ಯಾಲಯದ ಎಂ.ಎಸ್ಸಿ. ಅನ್ವಯಿಕ ರಸಾಯನಶಾಸ್ತ್ರದಲ್ಲಿ ಮೊದಲ ರ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅವರಿಗೆ ಕುಲಪತಿ ಪ್ರೊ. ಎಸ್.ಎ. ಬಾರಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಅಶ್ವಿನಿ ತೀರ್ಥಹಳ್ಳಿ ತಾಲೂಕಿನ ವಾರಳಿಯ ಮಿತ್ರವಿಂದ ಮತ್ತು ಗೋಪಾಲಕಷ್ಣರ ಪುತ್ರಿ. ಅವರು ಕಮ್ಮರಡಿಯ ವಿಶ್ವತೀರ್ಥ ಪ್ರೌಢಶಾಲೆ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಳೆ ವಿದ್ಯಾರ್ಥಿನಿ.
ಏಪ್ರಿಲ್ 10ರವರೆಗೆ ಅವಕಾಶ
ಶಿವಮೊಗ್ಗ: ಮೇ 5ರಂದು ರಾಜ್ಯಾದ್ಯಂತ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 2013ರ ಜನವರಿ 1ಕ್ಕೆ 18ವರ್ಷ ಪೂರೈಸಿರುವ ಪುರುಷ ಮತ್ತು ಮಹಿಳೆಯರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಏಪ್ರಿಲ್ 10ರವರೆಗೆ ಚುನಾವಣಾ ಆಯೋಗ ಅವಕಾಶ ನೀಡಿದೆ. ಇದಲ್ಲದೇ ಸ್ಥಳ ಬದಲಾವಣೆ, ಹೆಸರು ತಿದ್ದುಪಡಿ, ಹೆಸರು ಕೈಬಿಡಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಶಿವಮೊಗ್ಗ  ಗ್ರಾಮಾಂತರ ಪ್ರದೇಶಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ತಾಲೂಕು ಕಚೇರಿ ಮತ್ತು ಆಯಾ ಮತಗಟ್ಟೆ ಕೇಂದ್ರದ ಮತಗಟ್ಟೆ ಅಧಿಕಾರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಈ ಅವಕಾಶದ ಲಾಭ ಪಡೆದುಕೊಳ್ಳುವಂತೆ ಶಿವಮೊಗ್ಗ ತಹಸೀಲ್ದಾರರು ತಿಳಿಸಿದ್ದಾರೆ.
ನಾಳೆಯಿಂದ ಉರುಸ್
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ.25
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಬಾಬಾಬುಡನ್ ಗಿರಿಯಲ್ಲಿ ಮಾ. 27ರಿಂದ ಮೂರು ದಿನ ಉರುಸ್ ನಡೆಯಲಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ದೇಶದ ವಿವಿಧೆಡೆಯಿಂದ ಭಕ್ತರು ಆಗಮಿಸಲಿದ್ದಾರೆ. ಇಲ್ಲಿನ ಪೂಜಾ ವಿಧಾನಕ್ಕೆ ಸಂಬಂಧಿಸಿದಂತೆ ವಿವಾದ ಇಂದಿಗೂ ಜೀವಂತವಾಗಿದ್ದರೂ ಇಲ್ಲಿಗೆ ಬರುವ ಭಕ್ತರ ಸಂಖ್ಯೆ  ಇಳಿಮುಖವಾಗಿಲ್ಲ. ಇಂದಿಗೂ ಕೂಡ ಈ ಕ್ಷೇತ್ರ ಹಿಂದೂ, ಮುಸ್ಲಿಮರ ಭಾವೈಕ್ಯತಾ ಕೇಂದ್ರವಾಗಿ ಉಳಿದುಕೊಂಡಿದೆ. ಮೂರು ದಿನಗಳ ಉರುಸ್‌ನಲ್ಲಿ ಮುಸ್ಲಿಂ ಜನಾಂಗದರು ಮಾತ್ರ ಭಾಗವಹಿಸುವುದಿಲ್ಲ. ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು ಹಾಗೂ ದೇಶದ ಇತರೆಡೆಗಳಿಂದ ಹಿಂದೂ ಸಮುದಾಯದ ಭಕ್ತರು ಆಗಮಿಸಲಿದ್ದಾರೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement