ನಾಟಕೋತ್ಸವ
ಕ.ಪ್ರ.ವಾರ್ತೆ, ಸಾಗರ, ಮಾ.25
ವಿಶ್ವರಂಗಭೂಮಿ ದಿನಾಚರಣೆಯ ಅಂಗವಾಗಿ ಇಲ್ಲಿನ ಕಾಗೋಡು ರಂಗಮಂಚ ಸಂಸ್ಥೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾ. 27ರಿಂದ 30ರವರೆಗೆ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ನಾಟಕೋತ್ಸವ ಹಮ್ಮಿಕೊಂಡಿದೆ.
ಮಾ.27ರ ಸಂಜೆ ಆರಕ್ಕೆ ನಡೆಯಲಿರುವ ರಂಗಭೂಮಿ ದಿನಾಚರಣೆಯಲ್ಲಿ ರಂಗಕರ್ಮಿಗಳಾದ ಡಾ. ಗುರುರಾವ್ ಬಾಪಟ್, ದೇವೇಂದ್ರ ಬೆಳೆಯೂರು ಮತ್ತು ಪ್ರತಿಭಾ ರಾಘವೇಂದ್ರ ಪಾಲ್ಗೊಳ್ಳಲಿದ್ದು, ಕಾಗೋಡು ಅಣ್ಣಪ್ಪ ಅಧ್ಯಕ್ಷತೆ ವಹಿಸುವರು. ಅಂದು ರಂಗ ಪ್ರಯೋಗಗಳ ತುಣುಕುಗಳು ಮತ್ತು ರಂಗಗೀತೆ ಕಾರ್ಯಕ್ರಮ ನಡೆಯಲಿದೆ.
28 ರಸಂಜೆ ಆರಕ್ಕೆ ರಂಗಾಯಣದ ಹೊ.ನಾ.ಸತ್ಯ ನಾಟಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕಾಗೋಡು ತಿಮ್ಮಪ್ಪ ಅಧ್ಯಕ್ಷತೆ ವಹಿಸುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.