ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಸ್ತೆ ಅಪಘಾತ: ಪಾದಚಾರಿ ಸಾವು (ಸುದ್ದಿ ಸಂಕ್ಷೇಪ)

Rashmi Kasaragodu
Updated On : 26 Mar 2013, 10:19 am

ಶಿವಮೊಗ್ಗ: ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಮಹೇಶ್ ನಾಯ್ಕ ಮೃತಪಟ್ಟ ಪಾದಚಾರಿ. ಇವರು ಇಲ್ಲಿನ ಹಾರೋಬೆನವಳ್ಳಿ ಕೆರೆಯ ಬಳಿ ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮಹೇಶ್ ನಾಯ್ಕ ತೀವ್ರವಾಗಿ ಗಾಯಗೊಂಡಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಪ್ರಕರಣ ಹೊಳೆಹೊನ್ನೂರು ಠಾಣೆಯಲ್ಲಿ ದಾಖಲಾಗಿದೆ.
ನಾಳೆ ನೂತನ ರಥ ಸಮರ್ಪಣೆ
ಶಿವಮೊಗ್ಗ: ನಗರದ ದುರ್ಗಿಗುಡಿಯ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ರಥ ಸಮರ್ಪಣೆ ಹಾಗೂ ಬ್ರಹ್ಮರಥೋತ್ಸವ ಮಾ.27ರಂದು ಬೆಳಗ್ಗೆ ನಡೆಯಲಿದೆ. ಮಾ.26 ರಂದು ಬೆಳಗ್ಗೆ 9 ಗಂಟೆಗೆ ದುರ್ಗಾಹೋಮ, ಶ್ರೀಸೂಕ್ತ ಹೋಮ, ರಾಜಬೀದಿ ಉತ್ಸವ ನಡೆಯಲಿದೆ. ಮಾ.27 ರಂದು ಬೆಳಗ್ಗೆ 11.30 ರಿಂದ 11.55ರ ವರೆಗೆ ಅಮ್ಮನವರ ರಥಾರೋಹಣ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವಿರುತ್ತದೆ. ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಆಯೋಜಕರು ಕೋರಿದ್ದಾರೆ.
ಭೂಕಾಂತ್ ಆಯ್ಕೆ
ಶಿವಮೊಗ್ಗ: ಕರ್ನಾಟಕ ಪ್ರದೇಶ ಯುವಕ ರೈತ ಸಮಾಜದ ಸಂಘಟನಾ ಕಾರ್ಯದರ್ಶಿಯಾಗಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಡಿ. ಭೂಕಾಂತ್ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement