ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಅತ್ಯಾಚಾರ ಹೆಚ್ಚಳಕ್ಕೆ ಲಿಂಗ ತಾರತಮ್ಯ ಕಾರಣ'

Rashmi Kasaragodu
Updated On : 29 Mar 2013, 10:52 am

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ  ಮಾ.28
ಸಮಾಜದ ವ್ಯವಸ್ಥೆಯಲ್ಲಿ ಹೆಣ್ಣು, ಗಂಡುಗಳೆಂಬ ಲಿಂಗ ತಾರತಮ್ಯಗಳೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ಎಸ್‌ಎಂಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಸ್ವಾಮಿ ವೀರೇಶ್ ಮೋರಸ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಮಲ್ಲಿಪರ್ಪಸ್ ಸೋಷಿಯಲ್ ಸರ್ಮಿಸ್ ಸೊಸೈಟಿ, ಅಶೋಕ ನಗರದ ದೀಪ, ನ್ಯೂಮಂಡ್ಲಿಯ ಚೈತನ್ಯ, ಟಿಪ್ಪುನಗರದ ನಿಸರ್ಗ ಮತ್ತು ಹೊಸಬೆಳಕು ಹಾಗೂ ಸೀಗೆಹಟ್ಟಿಯ ಇಂದಿರಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂತಹ ತಾರತಮ್ಯದಿಂದ ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ವಿಷಾದನೀಯ ಎಂದರು.
ಆತಂಕ ತಂದಿದೆ: ನವದೆಹಲಿಯಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಇಡೀ ವಿಶ್ವವೇ ಎಚ್ಚೆತ್ತುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳನ್ನು ತಡೆಯುವ ಕಾನೂನುಗಳನ್ನು ಜಾರಿಗೊಳಿಸಬೇಕು. ಇಂದಿಗೂ ಹಲವಾರು ಅತ್ಯಾಚಾರ ಪ್ರಕರಣಗಳು ಸರಣಿಯಲ್ಲಿ ನಡೆಯುತ್ತಿರುವುದು ಆತಂಕ ತಂದಿದೆ ಎಂದು ತಿಳಿಸಿದರು.
ಭಾರತದಲ್ಲಿ ಮಹಿಳೆಯನ್ನು ಎರಡನೇ ದರ್ಜೆಯ ವ್ಯಕ್ತಿಯಾಗಿ ಪರಿಗಣಿಸಲಾಗುತ್ತಿದ್ದು, ಪುರುಷನಲ್ಲಿ ಬದಲಾಗುವ ವಿಕೃತ ಮನೋಭಾವದಿಂದ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದೀಪಾ ಮಹಿಳಾ ಸಂಘದ ಅಧ್ಯಕ್ಷೆ ಶಾರದಮ್ಮ, ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ರೇಖಾ,  ನಗರಸಭಾ ಸದಸ್ಯ ಸಯ್ಯದ್ ಮಜರ್ ಜಾವೀದ್, ಸುಮಾ ವೀರೇಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement